ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇಲ್ಲಿ ಖಾಲಿ ಇರುವ ಕಿರಿಯ ಸಹಾಯಕರ ಹುದ್ದೆಗಳ ನೇರ ನೇಮಕಾತಿ ಸಂಬಂಧ ಸ್ಪರ್ಧಾತ್ಮಕ ಪರೀಕ್ಷೆಗಳು ಹಾಗಾ ವಿವಿಧ ಹುದ್ದೆಗಳ ಕನ್ನಡ ಭಾಷೆ ಪರೀಕ್ಷೆಗಳು ಆಗಷ್ಟ್ 07 ರಂದು ದಾವಣಗೆರೆ ನಗರದಲ್ಲಿ ಒಟ್ಟು 24 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯುವುದರಿಂದ ಪರೀಕ್ಷಾ ಕೇಂದ್ರಗಳಲ್ಲಿ ಅವ್ಯವಹಾರಗಳು ನಡೆಯದಂತೆ ತಡೆಗಟ್ಟುವ ಸಲುವಾಗಿ ಪರೀಕ್ಷಾ ಕೇಂದ್ರ ಸುತ್ತಮುತ್ತ ಕನಿಷ್ಠ 200 ಮೀಟರ್ ವ್ಯಾಪ್ತಿಯೊಳಗೆ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಆದೇಶ ಹೊರಡಿಸಿದ್ದಾರೆ.
ನಗರದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು, ಡಿ.ಆರ್.ಎಂ ವಿಜ್ಞಾನ ಪದವಿ ಪೂರ್ವ ಕಾಲೇಜ್, ಎ.ವಿ ಕಮಲಮ್ಮ ಮಹಿಳಾ ಪದವಿ ಪೂರ್ವ ಕಾಲೇಜ್, ಮೋತಿವೀರಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜ್, ಎ.ಆರ್.ಜಿ ಪದವಿಪೂರ್ವ ಕಾಲೇಜ್, ರಾಜನಹಳ್ಳಿ ಸಿದ್ದಮ್ಮ ಮಹಿಳಾ ಸರ್ಕಾರಿ ಪದವಿ ಪೂರ್ವ ಕಾಲೇಜು, ಶ್ರೀ ತರಳಬಾಳು ಜಗದ್ಗುರು ಸಂಯೋಜಿತ ಪದವಿ ಪೂರ್ವ ಕಾಲೇಜ್, ಎಸ್.ಎ.ಜಿ.ಬಿ ಸಂಯೋಜಿತ ಪದವಿ ಪೂರ್ವ ಕಾಲೇಜ್, ಎಸ್.ಎಸ್.ಆರ್.ಎಲ್.ಎಸ್ ಮಹಿಳಾ ಪಿಯು ಕಾಲೇಜ್, ಅಥಣಿ ಸಂಯೋಜಿತ ಪದವಿ ಪೂರ್ವ ಕಾಲೇಜ್, ಶ್ರೀಮತಿ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ವಿಜ್ಞಾನ ಪಿಯು ಕಾಲೇಜ್, ಮಾಗನೂರು ಬಸಪ್ಪ ಪದವಿ ಪೂರ್ವ ಕಾಲೇಜ್, ಸೆಂಟ್ ಜಾನ್ಸ್ ಪಿಯು ಕಾಲೇಜ್, ಟಿ.ಎಂ.ಸಿ ಮತ್ತು ಟಿ.ಎಂ ಮೆಮೊ ಪಿಯು ಕಾಲೇಜ್, ಸೆಂಟ್ ಫಾಲ್ಸ್ ಪಿಯು ಕಾಲೇಜ್, ಎಂ.ಇ.ಎಸ್ ಪಿಯು ಕಾಲೇಜ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಅಕ್ಕಮಹಾದೇವಿ ಪ್ರೌಢಶಾಲೆ, ಮುದ್ದೆಗೌಡ್ರು ಮಲ್ಲಮ್ಮ ಮುರಿಗೆಪ್ಪ ಪ್ರೌಢಶಾಲೆ, ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜ್, ಬಾಪೂಜಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಘಟಕ-1, ಘಟಕ-2, ಬಾಪೂಜಿ ಪಾಲಿಟೆಕ್ನಿಕ್, ಸರ್ಕಾರಿ (ಮಾಜಿ ಪುರಸಭೆ) ಪಿಯು ಕಾಲೇಜ್ ದಾವಣಗೆರೆ ಇಲ್ಲಿನ 24 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಸುಗಮವಾಗಿ ನಡೆಯಲು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಅವ್ಯವಹಾರಗಳು ನಡೆಯದಂತೆ ತಡೆಗಟ್ಟುವ ಸಲುವಾಗಿ ಕೇಂದ್ರಗಳ ಸುತ್ತಮುತ್ತ 200 ಮೀಟರ್ ಪ್ರದೇಶವನ್ನು ಸಾರ್ವಜನಿಕ ಪ್ರವೇಶಕ್ಕೆ ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ ಹಾಗೂ ಪರೀಕ್ಷಾ ಕೇಂದ್ರದ ಸಮೀಪವಿರುವ ಜೆರಾಕ್ಸ್ ಅಂಗಡಿ, ಕಂಪ್ಯೂಟರ್ ಅಂಗಡಿಗಳು ಮತ್ತು ಸೈಬರ್ ಕೆಫೆಗಳನ್ನು ತೆರೆಯದಂತೆ ಮುಚ್ಚಬೇಕೆಂದು ಆದೇಶಿಸಿದ್ದಾರೆ. ಈ ಆದೇಶವು ಪರೀಕ್ಷಾರ್ಥಿಗಳಿಗೆ ಹಾಗೂ ಪರೀಕ್ಷೆಯಲ್ಲಿ ಕರ್ತವ್ಯ ನಿರ್ವಹಿಸಲು ನೇಮಕಾತಿ ಆದ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.