ಡಿ.ಇಎಲ್.ಇಡಿ, ಕೋರ್ಸಿಗೆ ದಾಖಲಾತಿ ಪಡೆಯಲು 2022-23 ನೇ ಸಾಲಿನಲ್ಲಿ ಆಫ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್.12 ರವರೆಗೆ ಅವಕಾಶವಿದ್ದು, ದ್ವಿತೀಯ ಪಿ.ಯು.ಸಿ. ಪೂರಕ ಪರೀಕ್ಷೆಯನ್ನು ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವವರೂ ಸಹ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ನಮೂನೆಗಳನ್ನು ತಿತಿತಿ.sಛಿhooಟeಜuಛಿಚಿಣioಟಿ.ಞಚಿಡಿ.ಟಿiಛಿ.iಟಿ ನಲ್ಲಿ ಡೌನ್‍ಲೋಡ್ ಮಾಡಿಕೊಂಡು ನಿಗದಿತ ದಾಖಲೆಗಳು ಮತ್ತು ಅರ್ಜಿ ಶುಲ್ಕವನ್ನು ಪಾವತಿಸಿದ ಡಿ.ಡಿ.ಯೊಂದಿಗೆ ನೋಡಲ್ ಕೇಂದ್ರವಾದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್), ದಾವಣಗೆರೆ ಇಲ್ಲಿ ನಿಗದಿತ ದಿನಾಂಕದೊಳಗೆ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಧಾನ, ಶುಲ್ಕದ ಮಾಹಿತಿ, ಅರ್ಹತೆ, ಮೀಸಲಾತಿ ವಿವರಗಳು ಮತ್ತು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 8884881816, 9844401092, 08192-231156 ನ್ನು ಸಂಪರ್ಕಿಸಬಹುದು ಎಂದು ದಾವಣಗೆರೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *