ನ್ಯಾಮತಿ : ರೈತರು ಹಾಗೂ ಸಾರ್ವಜನಿಕರು ಸಂಕಷ್ಟದಲ್ಲಿರುವ ಸಮಯದಲ್ಲಿ ಅಧಿಕಾರಿಗಳು ಅವರ ಬಳಿ ಹಣಕ್ಕೆ ಬೇಡಿಕೆ ಇಟ್ಟರೆ ನಾನು ಅದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲವೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.
ತಾಲೂಕಿನ ವಿವಿಧ ಗ್ರಾಮಗಳಿಗೆ ಅಧಿಕಾರಿಗಳು ಹಾಗೂ ಗ್ರಾಮಸ್ಥರೊಂದಿಗೆ ಭೇಟಿ ನೀಡಿ ಮಳೆ ಹಾನಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.
ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಲ್ಲಿ ವಾಡಿಕೆಗಿಂತ ನಾಲ್ಕು ಪಟ್ಟು ಹೆಚ್ಚು ಮಳೆಯಾಗಿದ್ದು, ಅತಿಯಾದ ಬಳೆಯಿಂದಾಗಿ ರೈತರ ಬದುಕೇ ಮೂರಾಬಟ್ಟೆಯಾಗಿದೆ ಎಂದ ಶಾಸಕರು, ವರುಣ ದೇವ ರೈತರ ಪಾಲಿಗೆ ಶಾಪವಾಗಿ ಪರಿಣಮಿಸಿದ್ದಾನೆಂದು ಬೇಸರ ವ್ಯಕ್ತ ಪಡಿಸಿದರು.
ನಮ್ಮ ಸರ್ಕಾರ ರೈತರು ಹಾಗೂ ಸಾರ್ವಜನಿಕರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಅವರ ಕಣ್ಣೀರು ಹೊರೆಸುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ ಎಂದ ಶಾಸಕರು, ಬೆಳೆ ಹಾನಿ ಮನೆಯಾನಿಯಾದವರಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸುವ ಬರವಸೆಯನ್ನು ಶಾಸಕರು ನೀಡಿದರು.