ನ್ಯಾಮತಿ : ಅವಳಿ ತಾಲೂಕಿನಾಧ್ಯಂತ ಸುರಿದ ಬಾರೀ ಮಳೆ ರೈತರ ಪಾಲಿಗೆ ಶಾಪವಾಗಿ ಪರಿಣಮಿಸಿದ್ದು, ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಾಧ್ಯಂತ ಹನ್ನೋಂದು ಸಾವಿರ ಹೆಕ್ಟೇರ್‍ಗೂ ಅಧಿಕ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳು ಹಾನಿಯಾಗಿವೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಹಾನಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಅವರು ಮಾತನಾಡಿದರು.
ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಹೆಕ್ಟೇರ್‍ನಷ್ಟು ಕೃಷಿ ಬೆಳೆಗಳು 650 ಹೆಕ್ಟೇರ್‍ಗೂ ಅಧಿಕ ತೋಟಗಾರಿಕೆ ಬೆಳೆಗಳಿಗೆ ಹಾನಿಯಾಗಿದ್ದು, ಇನ್ನೂ ಅಧಿಕಾರಿಗಳು ಬೆಳೆ ಹಾನಿ ಪೀಡಿತ ಪ್ರದೇಶಗಳಲ್ಲಿ ಹಾನಿಯ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆಂದರು.
ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಲ್ಲಿ 278 ಮನೆಗಳಿಗೆ ಹಾನಿಯಾಗಿದ್ದು, ಅವುಗಳಿಗೆ ಎ,ಬಿ,ಸಿ ಕೆಟಗರಿ ಆದಾರದ ಮೇಲೆ ಪರಿಹಾರ ನೀಡಲಾಗುವುದು ಎಂದ ಶಾಸಕರು, ಅವಳಿ ತಾಲೂಕಿನಲ್ಲಿ 296 ಮನೆಗಳಿಗೆ ನೀರು ನುಗ್ಗಿದ್ದು ಅವರಿಗೆ ತಲಾ ಹತ್ತು ಸಾವಿರ ಪರಿಹಾರ ನೀಡಲಾಗುವುದು ಎಂದರು.
ಅಧಿಕಾರಿಗಳು ಯಾವುದೇ ಕಾರಣ ನೀಡದೇ ಮಳೆ ಹಾನಿ ಪೀಡಿತ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ನಿಸ್ಪಕ್ಷಪಾತ ವರದಿ ನೀಡುವಂತೆ ಸೂಚನೆ ನೀಡಿದ್ದೇನೆಂದ ಶಾಸಕರು, ಬೆಳೆ ಕಳೆದುಕೊಂಡ ರೈತರಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸುವುದಾಗಿ ಹೇಳಿದರು.
ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ : ನ್ಯಾಮತಿ, ಸುರಹೊನ್ನೆ, ಕುದುರೆಕೊಂಡ, ಯರಗನಾಳ್ ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಅಲ್ಪಾವದಿ ತೋಟಗಾರಿಕೆ ಬೆಳೆಗಳಾದ ಟಮೋಟೋ,ಮೆಣಸಿನಕಾಯಿ,ಬೀನ್ಸ್,ಕೋಸು ಸೇರಿದಂತೆ ವಿವಿಧ ಬೆಳಗಳನ್ನು ವೀಕ್ಷಣೆ ಮಾಡಿದ ಶಾಸಕರು, ಅಧಿಕಾರಿಳಿಂದ ಹಾನಿಯ ಬಗೆ ಸಮಗ್ರ ಮಾಹಿತಿ ಪಡೆದರು.
ಈ ಸಂದರ್ಭ ತೋಟಗಾರಿಕೆ ಇಲಾಖೆ ಅಧಿಕಾರಿ ವೀರಭದ್ರಪ್ಪ, ಆರ್‍ಐ,ವಿಎ ಸೇರಿದಂತೆ ಗ್ರಾಮಸ್ಥರು, ರೈತರು ಸೇರಿದಂತೆ ಮತ್ತೀತರರಿದ್ದರು.

Leave a Reply

Your email address will not be published. Required fields are marked *