ಕರ್ನಾಟಕ ಸರ್ಕಾರದ ನಗರಾಭಿವೃದ್ದಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ ಬಸವರಾಜ್(ಬೈರತಿ) ಇವರು ಜಿಲ್ಲೆಯ ಸಮಸ್ತ ನಾಗರಿಕರಿಗೆ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಶುಭಾಶಯಗಳನ್ನು ತಿಳಿಸಿದ್ದಾರೆ.
ದೇಶಾದ್ಯಂತ ಸ್ವಾತಂತ್ರ್ಯದ 75ರ ಸಂಭ್ರಮವನ್ನು ವೈವಿಧ್ಯಮಯವಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಈ ಸಂಭ್ರಮದ ಒಂದು ಭಾಗವಾಗಿ ಕೇಂದ್ರ ಸರ್ಕಾರದ ‘ಹರ್ ಘರ್ ತಿರಂಗಾ’ ಎಂಬ ಘೋಷವಾಕ್ಯದೊಂದಿಗೆ 2022ರ ಆಗಸ್ಟ್ 13 ರಿಂದ 15 ರವರೆಗೆ ದಾವಣಗೆರೆ ಜಿಲ್ಲೆಯ ಸಾರ್ವಜನಿಕರು ತಮ್ಮ ಮನೆಯ ಅಂಗಳದಲ್ಲಿ ರಾಷ್ಟ್ರಪ್ರೇಮವನ್ನು ಅಭಿವ್ಯಕ್ತಗೊಳಿಸಲು ಅಭಿಯಾನವನ್ನು ಕೈಗೊಳ್ಳಲಾಗಿದೆ.
ದಾವಣಗೆರೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಪ್ರತಿ ಮನೆ-ಮನೆಯಲ್ಲೂ ಆಗಸ್ಟ್ 13 ರಿಂದ 15 ರವರೆಗೆ ಜಿಲ್ಲೆಯ ನಾಗರಿಕರು ರಾಷ್ಟ್ರಧ್ವಜವನ್ನು ಹಾರಿಸಿ ದೇಶಭಕ್ತಿ, ದೇಶಾಭಿಮಾನ ಬಿಂಬಿಸುವ ಮೂಲಕ ನಮ್ಮ ರಾಷ್ಟ್ರಪ್ರೇಮವನ್ನು ಅಭಿವ್ಯಕ್ತಗೊಳಿಸಿ, “ಹರ್ ಘರ್ ತಿರಂಗಾ” ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.