ನ್ಯಾಮತಿ ಃ ಹಿಂದೂ ಮುಸ್ಲಿಂ ಭಾವೈಕ್ಯತೆಯ ಮೊಹರಂ ಹಬ್ಬವನ್ನು ನ್ಯಾಮತಿ ಪಟ್ಟಣದ ಕೆರೆಓಣಿ ದರ್ಗಾದಲ್ಲಿ ಸಂಭ್ರಮ ಸಡಗರದಿಂದ ಆಚರಣೆ ಮಾಡಲಾಯಿತು.
ಮುಸ್ಲಿಂ ಬಾಂಧವರ ಪವಿತ್ರ ಹಬ್ಬಗಳಲ್ಲಿ ಒಂದಾದ ಮೊಹರಂ ಕಡೆಯ ದಿನವನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಪಂಜಾಗಳಿಗೆ ಪೂಜೆ ಸಲ್ಲಿಸಿ ವಿಶೇಷ ಧಾರ್ಮಿಕ ಆಚರಣೆಗಳನ್ನು ಕೈಗೊಳ್ಳಲಾಗಿತ್ತು.ಮೊಹರಂ ಕಡೆಯ ದಿನದ ಅಂಗವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಸಕ್ಕರೆ ಓದಿಸುವುದು ಪದ್ದತಿ. ಈ ಕಾರ್ಯದಲ್ಲಿ ಹಿಂದೂಗಳು ಪಾಲ್ಗೊಂಡು ತಮ್ಮ ಮನೆ ಹಾಗೂ ಮಕ್ಕಳ ಒಳಿತಿಗಾಗಿ ಸಕ್ಕರೆ ಓದಿಸಿ ಹಬ್ಬದ ಸಡಗರದಲ್ಲಿ ಪಾಲ್ಗೊಂಡು ಭಾವೈಕ್ಯತೆ ಮೆರೆಯುತ್ತಾರೆ.
ಮೊಹರಂ ಆಚರಣೆಯಲ್ಲಿ ಪೈಂಟರ್ ಅಸ್ಲಂ ಸಾಹೆಬ್ , ತರಕಾರಿ ಮುಸ್ತಾಕ್ ಸಾಹೆಬ್ , ಯುನುಸ್ ಬಾಷಾ ಮುಂತಾದವರು ಭಾಗವಹಿಸಿದ್ದರು