ದಾವಣಗೆರೆ ಆ.12
ಮಾನ್ಯ ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ ಬಸವರಾಜ(ಬೈರತಿ) ಇವರು ಆಗಸ್ಟ್-2022ರ ಮಾಹೆಯಲ್ಲಿ ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಸಚಿವರು ಆ.14 ರಂದು ಬೆಂಗಳೂರಿನಿಂದ ಹೊರಟು ಸಂಜೆ ದಾವಣಗೆರೆ ಪ್ರವಾಸಿ ಮಂದಿರಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು.
ಆ.15 ರಂದು ಬೆಳಿಗ್ಗೆ 08.30 ಕ್ಕೆ ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ಸಂಗೊಳ್ಳಿ ರಾಯಣ್ಣ ಪುತ್ಥಳಿಗೆ ಮಾಲಾರ್ಪಣೆ ಮಾಡುವರು. ನಂತರ ಬೆ.09 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗುವ 75 ನೇ ಸ್ವಾತಂತ್ರ್ಯೋತ್ಸವದ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ದಾವಣಗೆರೆಯಿಂದ ರಸ್ತೆಯ ಮೂಲಕ ಹಾವೇರಿಗೆ ತೆರಳುವರೆಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.