ನ್ಯಾಮತಿ: ಪಟ್ಟಣದ ನೆಹರೂ ರಸ್ತೆಯಲ್ಲಿರುವ ಬಿಎಸ್ಎನ್ಎಲ್ ಕೇಂದ್ರ ಕಚೇರಿಯಲ್ಲಿ ಸೋಮವಾರ ಸ್ವಾತಂತ್ರ್ಯ ದಿನಾಚರಣೆಯ ರಾಷ್ಟ್ರಧ್ವಜ ಹಾರಿಸದೇ ಇರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಯಿತು.
ಅಮೃತ ಮಹೋತ್ಸವದ ಅಂಗವಾಗಿ ಮನೆಮನೆಗಳಲ್ಲಿ ತ್ರಿವರ್ಣ ಧ್ವಜ ಹಾರಾಡುತ್ತಿದೆ. ಆದರೆ, ಈ ಕಚೇರಿಯ ಆವರಣ ಕಸದಿಂದ ತುಂಬಿದ್ದು, ಬಾಗಿಲನ್ನು ಸಹ ತೆರೆದಿಲ್ಲ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಆರ್ಟಿಐ ಅಧ್ಯಕ್ಷ ಡಿ.ಎಂ. ವಿಜೇಂದ್ರ ಮಹೇಂದ್ರಕರ, ಯುವ ಕಾಂಗ್ರೆಸ್ ತಾಲ್ಲೂಕು ಕಾರ್ಯದರ್ಶಿ ಯುನುಸ್ ಬಾಷಾ, ಯುವ ಬ್ರಿಗೇಡ್ ಪದಾಧಿಕಾರಿಗಳು, ಕೆ.ಎಂ. ಬಸವರಾಜ ಆಗ್ರಹಿಸಿದ್ದಾರೆ.