ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಕ್ಷೇತ್ರದ ಶಾಸಕರಾದ ಎಂ.ಪಿ.ರೇಣುಕಾಚಾರ್ಯ ಇವರು ಆಗಸ್ಟ್-2022ರ ಮಾಹೆಯಲ್ಲಿ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
  ಆ.20 ರಂದು ಬೆ.09 ಗಂಟೆಗೆ ಹೊನ್ನಾಳಿಯಿಂದ ಹೊರಟು ತಾಲ್ಲೂಕು ಆಡಳಿತ ವತಿಯಿಂದ ಆಯೋಜಿಸಿರುವ ‘ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಡಿ. ದೇವರಾಜ ಅರಸು ಅವರ 107ನೇ ಜನ್ಮ ದಿನಾಚರಣೆ ಕಾರ್ಯಕ್ರಮ’ದಲ್ಲಿ ಭಾಗವಹಿಸುವರು. ಬೆ.10.30ಕ್ಕೆ ಹೊನ್ನಾಳಿ ತಾಲ್ಲೂಕಿನ ಕತ್ತಿಗೆ ಗ್ರಾಮದಲ್ಲಿ ಆಯೋಜಿಸಿರುವ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮ.02 ಗಂಟೆಗೆ ನ್ಯಾಮತಿ ತಾಲ್ಲೂಕಿನ ಫಲವನಹಳ್ಳಿ ಗ್ರಾಮದಲ್ಲಿ ಆಯೋಜಿಸಿರುವ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಭಾಗವಹಿಸುವರು. ರಾ.10.30ಕ್ಕೆ ಹೊನ್ನಾಳಿಗೆ ಪ್ರಯಾಣ ಬೆಳಿಸಿ  ಮತ್ತು ವಾಸ್ತವ್ಯ.ಮಾಡುವರು.
  ಆ.21 ರಂದು ಬೆ.11 ಗಂಟೆಗೆ ಹೊನ್ನಾಳಿ ಪಟ್ಟಣದಲ್ಲಿ ಬೆಸ್ಕಾಂ ಗುತ್ತಿಗೆದಾರರ ಸಂಘದ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮ.12 ಗಂಟೆಗೆ ಹೊನ್ನಾಳಿ ತಾಲ್ಲೂಕಿನ ಕೂಲಂಬಿ ಗ್ರಾಮದಲ್ಲಿರುವ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರ ಆಯ್ಕೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಮ.01 ಗಂಟೆಗೆ ಕುಂದೂರು ಜಿಲ್ಲಾ ಪಂಚಾಯತಿ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಿಗೆ ಭೇಟಿ ನೀಡಿ, ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದು. ನಂತರ ಹೊನ್ನಾಳಿಗೆ ಪ್ರಯಾಣ ಮತ್ತು ವಾಸ್ತವ್ಯ.ಮಾಡುವರು.
  ಆ.22 ರಂದು ಬೆ.10.30ಕ್ಕೆ ನ್ಯಾಮತಿ ತಾಲ್ಲೂಕಿನ ಸೂರಗೊಂಡನಕೊಪ್ಪ ಗ್ರಾಮದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವ-ಸಹಾಯ ಸಂಘದ ವತಿಯಿಂದ ಹಮ್ಮಿಕೊಂಡಿರುವ ಮದ್ಯವರ್ಜನೆ ಶಿಬಿರದ ಉದ್ಘಾಟನೆ ನೆರವೇರಿಸುವರು. ಬೆ.11.30ಕ್ಕೆ ನ್ಯಾಮತಿ ತಾಲ್ಲೂಕಿನ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದು. ನಂತರ ಹೊನ್ನಾಳಿಗೆ ಪ್ರಯಾಣ ಮತ್ತು ವಾಸ್ತವ್ಯ. ಮಾಡುವರು.
 ಆ.23 ರಂದು ಬೆ.10 ಗಂಟೆಗೆ :ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ನ್ಯಾಮತಿ ಇಲ್ಲಿ  ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟ 2022-23 ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಬೆ.11 ಗಂಟೆಗೆ  ತಾಲ್ಲೂಕು ಕ್ರೀಡಾಂಗಣ, ಹೊನ್ನಾಳಿ ಇಲ್ಲಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸುವರು. ಮ.12 ಗಂಟೆಗೆ ಹೊನ್ನಾಳಿ ತಾಲ್ಲೂಕಿನ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವರು ನಂತರ ರಾತ್ರಿ 10 ಗಂಟೆಗೆ ರಸ್ತೆ ಮೂಲಕ ಬೆಂಗಳೂರಿಗೆ ತೆರಳುವರೆಂದು ಅವರ ಅಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *