ಡಿ.ದೇವರಾಜ ಅರಸುರವರ 107ನೇ ಜನ್ಮದಿನಾಚರಣೆಯ ಅಂಗವಾಗಿ ನಡೆದ ಎರಡನೇ
ದಿನದ ಕಾರ್ಯಕ್ರಮಗಳನ್ನು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಅವರು ಡಿ. ದೇವರಾಜ
ಅರಸುರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಕಾರ್ಯಕ್ರಮವನ್ನು
ಉದ್ಘಾಟಿಸಿದರು.
ನಂತರ ಮಾತಾನಾಡಿದ ಅವರು ಡಿ.ದೇವರಾಜ ಅರಸುರವರು ಬಡವಿದ್ಯಾರ್ಥಿಗಳಿಗೆ
ಅನುಕೂಲವಾಗಲೆಂದು ವಿದ್ಯಾರ್ಥಿ ನಿಲಯಗಳನ್ನು ಸ್ಥಾಪಿಸಿ, ಸಾವಿರಾರು ವಿದ್ಯಾರ್ಥಿಗಳ
ವ್ಯಾಸಂಗಕ್ಕಾಗಿ ಆಶ್ರಯತಾಣ ಮಾಡಿಕೊಟ್ಟರು. ಇದನ್ನು ವಿದ್ಯಾರ್ಥಿಗಳು
ಸದುಪಯೋಗಪಡಿಸಿಕೊಂಡು ಉತ್ತಮ ಪ್ರಜೆಗಳಾಗಿ ಹೊರಹೊಮ್ಮಿ, ಪಡೆದುಕೊಂಡ
ಉಪಯೋಗವನ್ನು ಒಬ್ಬರಿಂದ ಮತ್ತೊಬ್ಬರಿಗೆ ಸಹಾಯಹಸ್ತ ಚಾಚುತ್ತಾ ಭಾರತ ದೇಶವನ್ನು
ಪ್ರಪಂಚದ ಬಲಿಷ್ಠ ರಾಷ್ಟ್ರವಾಗಿ ನಿರ್ಮಾಣ ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಆರ್.ಬಿ.ಮದರಿ ಇವರು ಹಿಂದುಳಿದ ವರ್ಗಗಳ
ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳಲ್ಲಿ ನಡೆಸಿದ ವಿವಿಧ ಕ್ರೀಡೆ ಮತ್ತು ಸಾಂಸ್ಕೃತಿಕ
ಸ್ಫರ್ಧೆಗಳಲ್ಲಿ ಜಿಲ್ಲಾ ಮಟ್ಟದಲ್ಲಿ ವಿಜೇತರಾದ ನಿಲಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ ಮಾಡಿದರು.
ಸ್ನಾತಕೋತ್ತರ ಬಾಲಕಿಯರ ವಿದ್ಯಾರ್ಥಿನಿಲಯದ ಬಾಲಕಿಯರಿಂದ ನಾಡಗೀತೆಯನ್ನು
ಹಾಡಿದರು. ಹರಿಹರದ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಶ್ರೀಮತಿ.ನುಸ್ರತ್
ಪರ್ವೀನ್ ಸ್ವಾಗತಿಸಿದರು.

Leave a Reply

Your email address will not be published. Required fields are marked *