HONNALI : ಮನುಷ್ಯನ ವ್ಯಕ್ತಿತ್ವ ವಿಕಸನಕ್ಕೆ ಕ್ರೀಡೆ ಅತ್ಯಂತ ಪ್ರಮುಖವಾದದ್ದೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ಜಿಲ್ಲಾ ಪಂಚಾಯಿತಿ ದಾವಣಗೆರೆ, ತಾಲೂಕು ಪಂಚಾಯಿತಿ, ಶಿಕ್ಷಣ ಇಲಾಖೆ ಹೊನ್ನಾಳಿ ಮತ್ತು ನ್ಯಾಮತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಹೊನ್ನಾಳಿ ನ್ಯಾಮತಿ ಅವಳಿ ತಾಲೂಕುಗಳ ತಾಲೂಕುಮಟ್ಟದ ದಸರಾ ಕ್ರೀಡಾಕೂಟವನ್ನು ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದು ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ದಸರಾ ಕ್ರೀಡಾ ಕೂಟ ಹಿನ್ನೆಯಲ್ಲಿ 700 ಕ್ಕೂ ಹೆಚ್ಚು ಜನರು ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದು, ಕ್ರೀಡೆ ಎಂಬುದು ಮನುಷ್ಯನ ಜೀವನದಲ್ಲಿ ಅತ್ಯಂತ ಪ್ರಮುಖವಾದದ್ದು, ಕ್ರೀಡೆಯಿಂದ ಮನುಷ್ಯ ದೈಹಿಕವಾಗಿ ಸದೃಢವಾಗಲು ಅನುಕೂಲವಾಗಲಿದೆ ಎಂದರು.
ಮನುಷ್ಯನ ಜೀವನದಲ್ಲಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳು ಅತ್ಯಂತ ಮುಖ್ಯವಾದದ್ದು ಎಂದ ಶಾಸಕರು, ಕಾಮನ್‍ವೆಲ್ತ್ ಗೇಮ್‍ನಲ್ಲಿ ಪದಕಗಳ ಪಟ್ಟಿಯಲ್ಲಿ ಭಾರತ ದೇಶ ನಾಲ್ಕನೇ ಸ್ಥಾನದಲ್ಲಿದೇ ಎಂದರು.
ಅದೇ ರೀತಿ ವಿದ್ಯಾರ್ಥಿಗಳು ತಾಲೂಕುಮಟ್ಟ, ಜಿಲ್ಲಾಮಟ್ಟ,ರಾಜ್ಯಮಟ್ಟ, ರಾಷ್ಟ್ರಮಟ್ಟ, ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡುವ ಮೂಲಕ ಪೋಷಕರಿಗೆ, ದೇಶಕ್ಕೆ ಹೆಸರು ತರುವ ಕೆಲಸ ಮಾಡ ಬೇಕೆಂದರು.
ಇತ್ತೀಚಿನ ದಿನಗಳಲ್ಲಿ ಯುವಕರು ದುಶ್ಚಟಗಳಿಗೆ ಮಾರು ಹೋಗುತ್ತಿದ್ದು ಯುವಕರು ದುಶ್ಚಟಗಳಿಂದ ದೂರವಿದ್ದು ಉಜ್ವಲ ಭವಿಷ್ಯ ರೂಪಿಸಿಕೊಳ್ಳುವತ್ತಾ ಗಮನಕೊಡ ಬೇಕೆಂದರು.
ಸಮಾಜ ನಮಗೆ ಏನು ಕೊಡ್ತು ಎಂಬುದು ಮುಖ್ಯವಲ್ಲಾ, ನಾವು ಸಮಾಜಕ್ಕೆ ಏನು ಕೊಡುಗೆ ಕೊಟ್ಟಿದ್ದೇವೆ ಎಂಬುದು ಮುಖ್ಯ ಈ ನಿಟ್ಟಿನಲ್ಲಿ ಯುವಕರು ಉತ್ತಮ ಸಮಾಜ ನಿರ್ಮಾಣ ಮಾಡುವುದರ ಜೊತೆಗೆ ದೇಶ ಭಶಭಕ್ತಿ, ರಾಷ್ಟ್ರಭಕ್ತಿ ಬೆಳೆಸಿಕೊಳ್ಳುವಂತೆ ಕರೆ ನೀಡಿದರು.
ಈ ಸಂದರ್ಭ ತಾಲೂಕು ಕ್ರೀಡಾಧಿಕಾರಿ ವಣೇರ್ಶಪ್ಪ, ಪಿಎಸ್‍ಐ ಬಸವನಗೌಡ ಬಿರಾದರ್ ಸೇರಿದಂತೆ ಈಶ್ವರಪ್ಪ,ಚಂದ್ರಶೇಖರ್ ಹೆಗ್ಡೆ, ರಮೇಶ್, ವಿಜಯ್ ಸೇರಿದಂತೆ 40ನ ದೈಹಿಕ ಶಿಕ್ಷಣಕರು ಪಾಲ್ಗೊಂಡಿದ್ದರು.