ವಾಣಿಜ್ಯ ಉದ್ದೇಶಕ್ಕೆ ಮಕ್ಕಳನ್ನು ನೇಮಿಸಿಕೊಳ್ಳುವ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಜನರಲ್ಲಿ ಜಾಗೃತಿ ಹಾಗೂ ಕಾನೂನು ಅರಿವು ಮೂಡಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರವೀಣ್ ನಾಯಕ್ ಹೇಳಿದರು.
       ಬುಧವಾರ ನಗರದ ಕನ್ನಡ ಸಾಹಿತ್ಯ ಪರಿಷತ್ತು ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಸ್ಥೆ ಹಾಗೂ ವಿವಿಧ ಇಲಾಖೆಗಳ ಸ್ವಯಂ ಸೇವಾ ಸಂಸ್ಥೆಗಳು ದಾವಣಗೆರೆ ಇವರುಗಳ ಸಂಯುಕ್ತಾಶ್ರಯದಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ(ನಿಷೇಧ ಹಾಗೂ ನಿಯಂತ್ರಣ) ಕಾಯ್ದೆ ಕುರಿತು ಕಾನೂನು ಅರಿವು-ನೆರವು ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.
14 ರಿಂದ 16 ವರ್ಷದ ಒಳಗಿನ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಮಕ್ಕಳನ್ನು ಯಾವುದೇ ಕೆಲಸಕ್ಕೆ ಬಳಸಿಕೊಳ್ಳಬಾರದು. ಮಕ್ಕಳನ್ನು ಕೆಲಸದಲ್ಲಿ ತೊಡಿಸಿಕೊಳ್ಳುವುದರಿಂದ ಅವರು ಶಿಕ್ಷಣದಿಂದ ವಂಚಿತರಾಗಿ ತಮ್ಮ ಬಾಲ್ಯವನ್ನು ಅನುಭವಿಸದೆ ಕಷ್ಟವನ್ನು ಅನುಭವಿಸುತ್ತಿದ್ದಾರೆ. ಬಾಲ್ಯದಲ್ಲೆ ದುಡಿಯಲು ಕಳಿಸುತ್ತಿರುವ ಪಾಲಕರು ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಿ ಮಕ್ಕಳನ್ನು ವಿದ್ಯಾವಂತರಾಗಿ ಮಾಡುವುದರಿಂದ ಬಾಲಕಾರ್ಮಿಕ ಪದ್ಧತಿಯನ್ನು ಹೋಗಲಾಡಿಸಬಹುದು  ಎಂದು ಹೇಳಿದರು.
  ಬಳ್ಳಾರಿ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತರಾದ ಎಸ್.ಆರ್ ವೀಣಾ ಪ್ರಾಸ್ತಾಮಿಕವಾಗಿ ಮಾತನಾಡಿ, ಬಾಲ್ಯದಲ್ಲಿ ಮಕ್ಕಳನ್ನು ಶಾಲೆಗೆ ಕಳಿಸುವುದು ಎಲ್ಲಾ ಪೆÇೀಷಕರ ಆದ್ಯ ಕರ್ತವ್ಯ, ಕೆಲವೊಂದು ಕಡೆಗಳಲ್ಲಿ ಮಕ್ಕಳನ್ನು ಶಾಲೆಗೆ ಕಳಿಸದೆ ಕೆಲಸದಲ್ಲಿ ತೊಡಗಿಸಿಕೊಳ್ಳುತ್ತಾರೆ ಹಾಗಾಗಿ ಅಂತಹ ಮಕ್ಕಳನ್ನು ಶಾಲೆಗೆ ಸೇರಿಸಿ ಸತ್ಪ್ರಜೆಯಾಗಿ ಮಾಡುವ ಜವಾಬ್ದಾರಿ ಸರ್ಕಾರ ಹಾಗೂ ಪೋಷಕರದಾಗಿರುತ್ತದೆ. ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಹಿರಿಯ ಕಾನೂನು ಅಧಿಕಾರಿ ಕೆ.ಜಿ.ಕಲ್ಪನಾ ಉಪನ್ಯಾಸ ನೀಡಿದರು, ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯ ಮಂಜುಳಾ, ಆರೋಗ್ಯ ಇಲಾಖೆಯ ಸುರೇಶ್ ಬಾರ್ಕಿ ಮಾತನಾಡಿದರು.
       ಈ ವೇಳೆ ಕಾರ್ಮಿಕ ಅಧಿಕಾರಿ ಜಿ.ಇಬ್ರಾಹಿಂ ಸಾಬ್, ಮಂಜುನಾಥ್, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ನಿರ್ದೇಶಕ ಪ್ರಸನ್ನ ಈ.ಎನ್, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರು ಸೇರಿದಂತೆ ಜಿಲ್ಲೆಯ ಎಲ್ಲಾ ಕಾರ್ಮಿಕ ನಿರೀಕ್ಷಕರು ಉಪಸ್ತಿತರಿದ್ದರು.

Leave a Reply

Your email address will not be published. Required fields are marked *