ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ರವರು ಆ.26 ರಂದು ಬೆಳಗ್ಗೆ 10 ಗಂಟೆಗೆ ಹೊನ್ನಾಳಿಯ ಹಿರೇಕಲ್ಮಠದಲ್ಲಿ ಶ್ರೀ ಷ|| ಬ್ರ|| ಡಾ|| ಒಡೆಯರ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮಿಗಳವರ ನೇತೃತ್ವದಲ್ಲಿ ಆಯೋಜಿಸಿರುವ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬೆ.11 ಕ್ಕೆ ಹೊನ್ನಾಳಿ ನೋಡಲ್ ವ್ಯಾಪ್ತಿಯ ಸರ್ಕಾರಿ ಐ.ಟಿ.ಐ. ಕಾಲೇಜಿನ ಎಸ್.ಸಿ. & ಎಸ್.ಟಿ. ವಿದ್ಯಾರ್ಥಿಗಳಿಗೆ ಟೂಲ್ ಕಿಟ್ ವಿತರಣೆ ಮಾಡುವರು. ಮ.12 ಕ್ಕೆ ಚಿನ್ನಿಕಟ್ಟೆ ಗ್ರಾಮದಲ್ಲಿ ಚಿನ್ನಿಕಟ್ಟೆ ಗ್ರಾಮ ಪಂಚಾಯತಿ ವತಿಯಿಂದ ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಉದ್ಘಾಟನೆ ನೆರವೇರಿಸುವರು. ನಂತರ ಮ.01.15 ರಿಂದ ಸಂ.06 ರವರೆಗೆ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳ ವ್ಯಾಪ್ತಿಯಲ್ಲಿನ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದು. ನಂತರ ಹೊನ್ನಾಳಿಗೆ ಪ್ರಯಾಣ ಮತ್ತು ವಾಸ್ತವ್ಯ.
ಆ.27 ರಂದು ಬೆಳಿಗ್ಗೆ 11 ಗಂಟೆಗೆ ಹೊನ್ನಾಳಿ ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದ ಉದ್ಘಾಟನೆ ನೆರವೇರಿಸುವರು. ಮ.12 ರಿಂದ ಸಂ.06 ಗಂಟೆಯ ವರೆಗೆ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳ ವ್ಯಾಪ್ತಿಯಲ್ಲಿನ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದು. ನಂತರ ಹೊನ್ನಾಳಿಗೆ ಪ್ರಯಾಣ ಮತ್ತು ವಾಸ್ತವ್ಯ.
ಆ.28 ರ ಬೆಳಿಗ್ಗೆ 11 ಗಂಟೆಗೆ ಹೊನ್ನಾಳಿ ತಾಲ್ಲೂಕಿನ ಗೊಲ್ಲರಹಳ್ಳಿ ಗ್ರಾಮದ ಬಸ್ ನಿಲ್ದಾಣ ಕಾಮಗಾರಿಯ ಉದ್ಘಾಟನೆ ನೆರವೇರಿಸುವರು. ಮ.12.15 ರಿಂದ ಸಂ.06 ಗಂಟೆಯ ವರೆಗೆ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳ ವ್ಯಾಪ್ತಿಯಲ್ಲಿನ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದು. ನಂತರ ಹೊನ್ನಾಳಿಗೆ ಪ್ರಯಾಣ ಮತ್ತು ವಾಸ್ತವ್ಯ.
ಆ.29 ರಂದು ಬೆಳಗ್ಗೆ 10.30 ಕ್ಕೆ ನ್ಯಾಮತಿ ತಾಲ್ಲೂಕಿನ ಸೂರಗೊಂಡನಕೊಪ್ಪ ಗ್ರಾಮದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವ-ಸಹಾಯ ಸಂಘದ ವತಿಯಿಂದ ಹಮ್ಮಿಕೊಂಡಿರುವ ಮದ್ಯವರ್ಜನೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸುವರು. ಬೆ.11.30 ಕ್ಕೆ ಹೊನ್ನಾಳಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದ ಉದ್ಘಾಟನೆ ನೆರವೇರಿಸುವರು. ಮ.01 ರಿಂದ ಸಂ.06 ಗಂಟೆಯ ವರೆಗೆ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳ ವ್ಯಾಪ್ತಿಯಲ್ಲಿನ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದು. ನಂತರ ಹೊನ್ನಾಳಿಗೆ ಪ್ರಯಾಣ ಮತ್ತು ವಾಸ್ತವ್ಯ.
ಆ.30 ರ ಬೆಳಿಗ್ಗೆ 10 ರಿಂದ ಸಂ.06 ಗಂಟೆಯ ವರೆಗೆ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳ ವ್ಯಾಪ್ತಿಯಲ್ಲಿನ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದು. ನಂತರ ಹೊನ್ನಾಳಿಗೆ ಪ್ರಯಾಣ ಮತ್ತು ವಾಸ್ತವ್ಯ.
ಆ.31 ರಂದು ಬೆಳಗ್ಗೆ 10.15 ರಿಂದ ಸಂ.04.30 ಗಂಟೆಯ ವರೆಗೆ ಗಣೇಶ ಚತುರ್ಥಿ ಅಂಗವಾಗಿ ವಿವಿಧ ಗ್ರಾಮಗಳಲ್ಲಿ ಆಯೋಜಿಸಿರುವ ಗಣೇಶೋತ್ಸವ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಹಾಗೂ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳ ವ್ಯಾಪ್ತಿಯಲ್ಲಿನ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವರು. ನಂತರ ರಾತ್ರಿ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ವಿಶೇಷ ಕರ್ತವ್ಯಾಧಿಕಾರಿ ಕೆ.ರುದ್ರೇಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.