ಹೊನ್ನಾಳಿ : ಪ್ರತಿಯೊಬ್ಬ ವಿದ್ಯಾರ್ಥಿಯೂ ಕ್ರೀಡಾ ಮನೋಭಾವನೆಯನ್ನು ಬೆಳೆಸಿಕೊಳ್ಳುವ ಮೂಲಕ, ಕ್ರೀಡಾ ಸ್ಪೂರ್ತಿ ಮೆರೆಯ ಬೇಕೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಕರೆ ನೀಡಿದರು.
ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಹೊನ್ನಾಳಿ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮನುಷ್ಯನ ದೇಹ ಸದೃಢವಾಗಿರಲು ಕ್ರೀಡೆ ಸಹಕಾರಿಯಾಗಲಿದೆ ಎಂದ ಶಾಸಕರು, ಗೆದ್ದಾಗ ಹಿಗ್ಗದೇ, ಸೋತಾಗ ಕುಗ್ಗದೆ ಎರಡನ್ನು ಸಮಾನವಾಗಿ ಸ್ಪೀಕರಿಸ ಬೇಕೆಂದರು.
ವಿದ್ಯಾರ್ಥಿಗಳಿಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಯೂ ಅತಿ ಮುಖ್ಯ ಎಂದ ಶಾಸಕರು ವಿದ್ಯಾರ್ಥಿಗಳಲ್ಲಿ ಕ್ರೀಡೆಗಳಲ್ಲಿ ಪಾಲ್ಗೊಳ್ಳುವ ಮೂಲಕ ದೇಹ ಸೌದಂರ್ಯ ಕಾಪಾಡಿಕೊಳ್ಳುವಂತೆ ಕಿವಿ ಮಾತು ಹೇಳಿದರು.
ವಿದ್ಯಾರ್ಥಿಗಳು ತಾಲೂಕುಮಟ್ಟ, ಜಿಲ್ಲಾಮಟ್ಟ,ರಾಜ್ಯಮಟ್ಟ,ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೀಡೆಯಲ್ಲಿ ಪಾಲ್ಗೊಂಡು, ದೇಶಕ್ಕೆ,ರಾಜ್ಯಕ್ಕೆ,ತಮ್ಮ ಗ್ರಾಮಗಳಿಗೆ ಹೆಸರು ತರುವ ಕೆಲಸ ಮಾಡ ಬೇಕೆಂದರು.
ಆದರೇ ಇತ್ತೀಚಿನ ದಿನಗಳಲ್ಲಿ ಯುವಕರು ದುಶ್ಚಟಗಳಿಗೆ ಮಾರು ಹೋಗುತ್ತಿದ್ದು, ಅಮೂಲ್ಯವಾದ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದು ಬೇಸರ ಮೂಡಿಸಿದೆ ಎಂದ ಶಾಸಕರು, ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು ಉಜ್ವಲ ಭವಿಷ್ಯ ರೂಪಿಸಿಕೊಳ್ಳುವ ಮೂಲಕ ಪೋಷಕರಿಗೆ, ಕಾಲೇಜಿಗೆ ಹೆಸರು ತರುವ ಕೆಲಸ ಮಾಡ ಬೇಕೆಂದರು.
ವಿವಿಧ ಕ್ರೀಡೆಗಳಲ್ಲಿ ಹೊನ್ನಾಳಿ ತಾಲೂಕಿನ 10 ಕಾಲೇಜಿನ ಒಂದು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಎಡಿವಿಎಸ್ ಶಾಲೆಯ ಅಧ್ಯಕ್ಷರಾದ ಎಚ್.ಎಸ್.ಕೃಷ್ಣಮೂರ್ತಿ, ಕಾಲೇಜಿನ ಕಾರ್ಯದರ್ಶಿ ಶಾಂತಕೃಷ್ಣ ಸೇರಿದಂತೆ ತಾಲೂಕಿನ ಕ್ರೀಡಾ ಅಧಿಕಾರಿಗಳು ಶಿಕ್ಷಕರು,ಪ್ರಾಂಶುಪಾಲರು ಪಾಲ್ಗೊಂಡಿದ್ದರು.