ಹೊನ್ನಾಳಿ : ಮನುಷ್ಯನ ಜೀವನದಲ್ಲಿ ಶಿಕ್ಷಣ ಎಷ್ಟು ಮುಖ್ಯವೋ,ಕ್ರೀಡೆಗಳು ಕೂಡ ಅಷ್ಟೇ ಮುಖ್ಯ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡೆಗೂ ಹೆಚ್ಚಿನ ಮಹತ್ವ ನೀಡುವಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ನಗರದ ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕ್ರೀಡೆಯಿಂದ ಮನುಷ್ಯ ಮಾನಸೀಕವಾಗಿ ಮತ್ತು ದೈಹಿಕವಾಗಿ ಸದೃಢವಾಗಿರಲು ಅನುಕೂಲವಾಗಲಿದ್ದು, ಯುವಕ ಯುವತಿಯರು ಕ್ರೀಡೆಯನ್ನು ಮೈಗೂಡಿಸಿಕೊಳ್ಳುವಂತೆ ಸಲಹೆ ನೀಡಿದರು.
ಕಳೆದ ಎರಡು ವರ್ಷಗಳಿಂದ ಕೋವಿಡ್‍ನಿಂದಾಗಿ ಕ್ರೀಡಾ ಕ್ಷೇತ್ರ ನಲುಗಿ ಹೋಗಿತ್ತು.ಆದರೇ ಇದೀಗ ಕೋವಿಡ್ ಪ್ರಮಾಣ ಕಡಿಮೆಯಾಗಿದ್ದು ಕ್ರೀಡಾಕೂಟಗಳು ಆರಂಭಗೊಂಡಿವೆ ಎಂದರು.
ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲಾ,ಕ್ರೀಡೆಯಲ್ಲಿ ಪಾಲ್ಗೋಳ್ಳುವುದು ಮುಖ್ಯವೆಂದ ಶಾಸಕರು,ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಪಾಲ್ಗೊಂಡು ಕ್ರೀಡಾ ಸ್ಪೂರ್ತಿ ಮೆರೆಯುವಂತೆ ಕರೆ ನೀಡಿದರು.
ವಿದ್ಯಾರ್ಥಿಗಳು ತಾಲೂಕು ಮಟ್ಟದಿಂದ,ರಾಜ್ಯಮಟ್ಟ,ರಾಷ್ಟ್ರಮಟ್ಟ,ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೀಡೆಯಲ್ಲಿ ಪಾಲ್ಗೊಳ್ಳುವ ಮೂಲಕ ದೇಶಕ್ಕೆ,ರಾಜ್ಯಕ್ಕೆ,ಪೋಷಕರಿಗೆ ಹೆಸರು ತರುವ ಕೆಲಸ ಮಾಡ ಬೇಕೆಂದರು.
ಆದರೇ ಇತ್ತೀಚಿನ ದಿನಗಳಲ್ಲಿ ಯುವಕರು ದುಶ್ಚಟಗಳಿಗೆ ಮಾರುಹೋಗುತ್ತಿದ್ದು, ಯುವಕರು ದುಶ್ಚಟಗಳಿಂದ ದೂರವಿದ್ದು ಕ್ರೀಡೆಗಳಲ್ಲಿ ಪಾಲ್ಗೋಳ್ಳುವ ಮೂಲಕ ಉತ್ತಮ ಪ್ರಜೆಗಳಾಗಬೇಕೆಂದು ಕಿವಿ ಮಾತು ಹೇಳಿದರು.
ಈ ಸಂದರ್ಭ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ್ ಸ್ವಾಮೀ, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಈಶ್ವರಪ್ಪ, ದೈಹಿಕ ಶಿಕ್ಷಣಾಧಿಕಾರಿ ಸಂಘದ ಅಧ್ಯಕ್ಷ ಮಂಜುನಾಥ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕುಮಾರ್ ಸೇರಿದಂತೆ ಅವಳಿ ತಾಲೂಕಿನ ದೈಹಿಕ ಶಿಕ್ಷಕರಿದ್ದರು.