2021-22ನೇ ಸಾಲಿನ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಉಪಯೋಜನೆಯಲ್ಲಿ ಬಳಕೆಯಾಗದ ಅನುದಾನದ ಉದ್ಯೋಗಿನಿ ಯೋಜನೆಯಡಿ ಪರಿಶಿಷ್ಟ ಪಂಗಡದ 14 ಮಹಿಳೆಯರಿಗೆ ಸೌಲಭ್ಯ ಒದಗಿಸಲಾಗಿದ್ದು. ದಾವಣಗೆರೆ ಜಿಲ್ಲೆಗೆ ಒಟ್ಟು 14 ಭೌತಿಕ ಗುರಿಯನ್ನು ನಿಗದಿಪಡಿಸಿ ಅರ್ಹ ಪರಿಶಿಷ್ಟ ಪಂಗಡದ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಆದಾಯೋತ್ಪನ್ನ ಚಟುವಟಿಕೆಗಳನ್ನು ಕೈಗೊಳ್ಳಲು ಬ್ಯಾಂಕುಗಳ ಸಹಯೋಗದೊಂದಿಗೆ ಸಾಲದ ವ್ಯವಸ್ಥೆ ಹಾಗೂ ನಿಗಮದಿಂದ ಸಹಾಯಧನವನ್ನು ನೀಡಲಾಗುವುದು.
ನಿಗದಿತ ದಾಖಲಾತಿಗಳೊಂದಿಗೆ ಪಡೆದ ಅರ್ಜಿಯನ್ನು ಪ್ರಾಥಮಿಕ ಪರಿಶೀಲನೆ ಮಾಡಿ ಅರ್ಹ ಅರ್ಜಿಗಳನ್ನು ಜಿಲ್ಲಾಮಟ್ಟದ ಆಯ್ಕೆ ಸಮಿತಿಯಲ್ಲಿ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅರ್ಜಿಗಳನ್ನು ಅರ್ಜಿದಾರರ ಸೇವಾ ವಲಯದಲ್ಲಿ ಬರುವ ಬ್ಯಾಂಕಿನ ಶಾಖೆಗಳಿಗೆ ಸಾಲ ಮಂಜೂರಾತಿಗಾಗಿ ಶಿಫಾರಸ್ಸು ಮಾಡಲಾಗುವುದು. ಬ್ಯಾಂಕಿನಿಂದ ಸಾಲ ಮಂಜೂರಾದ ನಂತರ ಇಡಿಪಿ ತರಬೇತಿ ಏರ್ಪಡಿಸಿ ಸಹಾಯಧನ ಬಿಡುಗಡೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವವರು ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಎಲ್ಲಾ ದಾಖಲಾತಿಗಳೊಂದಿಗೆ ಸೆ.26 ರಂದು ಸಂಜೆ 5:30 ರೊಳಗಾಗಿ ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗಳಿಗೆ ಅರ್ಜಿ ಸಲ್ಲಿಸಬೇಕು ನಂತರ ಬಂದಂತಹ ಹಾಗು ಅಪೂರ್ಣ ಮಾಹಿತಿ ಇರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9449447711 ಯನ್ನು ಸಂಪರ್ಕಿಸುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.