ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ಹಾಗೂ ದೃಷ್ಟಿದೋಷ ನಿಯಂತ್ರಣ ಕಾರ್ಯಕ್ರಮ ಹಾಗೂ ಸಮಾಜಕಾರ್ಯ ವಿಭಾಗ, ದಾವಣಗೆರೆ ವಿಶ್ವವಿದ್ಯಾನಿಲಯ ಶಿವಗಂಗೋತ್ರಿ ಇವರ ಸಂಯುಕ್ತಾಶ್ರಯದಲ್ಲಿ ಸೆ.07 ರಂದು ಬೆ.10.30 ಗಂಟೆಗೆ ಎಂ.ಬಿ.ಎ ಸಭಾಂಗಣ ವಿಶ್ವವಿದ್ಯಾನಿಲಯ ದಾವಣಗೆರೆ ಇಲ್ಲಿ 37ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ ಆಚರಣೆಯನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಾಧಿಕಾರಿ ಡಾ. ಎ. ಚನ್ನಪ್ಪ ಉದ್ಘಾಟಿಸುವರು. ವಿಶ್ವವಿದ್ಯಾನಿಲಯದ ಕುಲಪತಿ ಬಿ.ಡಿ ಕುಂಬಾರ ಅಧ್ಯಕ್ಷತೆ ವಹಿಸುವರು ಹಾಗೂ ವಿಶ್ವವಿದ್ಯಾನಿಲಯದ ಕುಲಸಚಿವರಾದ ಸರೋಜ ಬಿ.ಬಿ ಗೌರವ ಉಪಸ್ಥಿತರಿರುವರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ.ನಾಗರಾಜ, ಚಿಗಟೇರಿ ಜಿಲ್ಲಾ ಆಸ್ಪತ್ರೆ ಅಧೀಕ್ಷಕರು ಡಾ. ಷಣ್ಮುಖಪ್ಪ, ಜಿಲ್ಲಾ ಅಂಧತ್ವ ಮತ್ತು ದೃಷ್ಟಿದೋಷ ನಿಯಂತ್ರಣಾಧಿಕಾರಿ ಡಾ. ಮುರುಳಿಧರ ಪಿ.ಡಿ, ದಾವಣಗೆರೆ ಸಮಾಜಕಾರ್ಯ ಅಧ್ಯಯನ ವಿಭಾಗದ
ಡಾ.ಶಿವಲಿಂಗಪ್ಪ, ಸಹ ಪ್ರಧ್ಯಾಪಕರಾದ ಡಾ. ಲೋಕೇಶ ಎಂ.ಯು ಪಾಲ್ಗೊಳ್ಳುವರು. ಚಿಗಟೇರಿ ಜಿಲ್ಲಾ ಆಸ್ಪತ್ರೆ ಹಿರಿಯ ನೇತ್ರತಜ್ಞರಾದ ಡಾ. ಶ್ರೀಮಂತ ಸಿದ್ದಪ್ಪ ಕೋಳಕೊರ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸುವರೆಂದು ಪ್ರಕಟಣೆ ತಿಳಿಸಿದೆ.