ದಾವಣಗೆರೆ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಸರ್ಕಾರದ ಮಾರ್ಗಸೂಚಿಯಂತೆ ನಿಯಮಾನುಸಾರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿಯ ಸಭೆಯ ಮೂಲಕ ನೇಮಕ ಮಾಡಲಾಗುತ್ತಿದ್ದು, ಅರ್ಜಿ ಸಲ್ಲಿಸುವವರು ಯಾವುದೇ ಮಧ್ಯವರ್ತಿಗಳ ಆಮಿಷಕ್ಕೆ ಒಳಗಾಗಬಾರದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ