ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ರವರು ಸೆ.09 ರಿಂದ ಸೆ.11 ರವರೆಗೆ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.
ಸೆ.09 ರಂದು ಬೆ.10 ರಿಂದ ಸಂ.7 ಗಂಟೆಯವರೆಗೆ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳ ವ್ಯಾಪ್ತಿಯಲ್ಲಿನ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಂತರ ಹೊನ್ನಾಳಿಗೆ ಭೇಟಿ ನೀಡಿ ವಾಸ್ತವ್ಯ ಹೂಡುವರು.
ಸೆ.10 ರಂದು ಬೆ.10 ಕ್ಕೆ ನ್ಯಾಮತಿ ಪಟ್ಟಣದ ಎಪಿಎಂಸಿ ಆವರಣದಲ್ಲಿ ನಡೆಯುವ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬೆ.11 ಕ್ಕೆ ನ್ಯಾಮತಿ ಪಟ್ಟಣದ ಬೇಡರ ಕಣ್ಣಪ್ಪ ಸಮುದಾಯ ಭವನದಲ್ಲಿ ಪದ್ಮಶ್ರೀ ಪುರಸ್ಕøತ ಶ್ರೀಮತಿ ಸಾಲುಮರದ ತಿಮ್ಮಕ್ಕ ಇವರ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮ.03 ಕ್ಕೆ ಹೊನ್ನಾಳಿ ಪಟ್ಟಣದ ವಾಲ್ಮೀಕಿ ಭವನದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಒಕ್ಕೂಟದ ವತಿಯಿಂದ ಏರ್ಪಡಿಸಿರುವ ಸಭೆಯಲ್ಲಿ ಭಾಗವಹಿಸುವರು. ನಂತರ ಸಂಜೆ 4.15 ರಿಂದ 07 ರ ವರೆಗೆ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳ ವ್ಯಾಪ್ತಿಯಲ್ಲಿನ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ನಂತರ ಹೊನ್ನಾಳಿಗೆ ಪ್ರಯಾಣ ಮತ್ತು ವಾಸ್ತವ್ಯ ಮಾಡುವರು.
ಸೆ.11 ಮ.12 ಕ್ಕೆ ದಾವಣಗೆರೆ ನಗರದಲ್ಲಿ ನಡೆಯುವ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವುದು. ನಂತರ ಮ.3.15 ಕ್ಕೆ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳ ವ್ಯಾಪ್ತಿಯಲ್ಲಿನ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ನಂತರ ಹೊನ್ನಾಳಿಗೆ ಪ್ರಯಾಣ ಬೆಳೆಸಿ ವಾಸ್ತವ್ಯ ಮಾಡುವರು ಎಂದು ವಿಶೇಷ ಕರ್ತವ್ಯಾಧಿಕಾರಿ ಕೆ.ರುದ್ರೇಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.