ದಾವಣಗೆರೆ: ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ಸೆಪ್ಟೆಂಬರ್ 10ರಂದು ಬ್ರಹ್ಮಶ್ರೀ ನಾರಾಯಣ ಗುರು ಅವರ ಜಯಂತಿಯನ್ನು ಜಿಲ್ಲಾ ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ತಿಳಿಸಿದ್ದಾರೆ.
ಅಂದು ಬೆಳಿಗ್ಗೆ 11-30ಕ್ಕೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪನವರ ಅಧ್ಯಕ್ಷತೆಯಲ್ಲಿ ನಡೆವ ಈ ಕಾರ್ಯಕ್ರಮದಲ್ಲಿ ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪನವರು, ಮಾಜಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್, ಹಾಲಿ ಮತ್ತು ಮಾಜಿ ಶಾಸಕರುಗಳು ಭಾಗವಹಿಸುವರು.
ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಮುಖಂಡರು, ಯುವ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್, ಜಿಲ್ಲಾ ಸೇವಾದಳ, ಕಾರ್ಮಿಕ ವಿಭಾಗ, ಓ.ಬಿ.ಸಿ.ವಿಭಾಗದ ಎನ್.ಎಸ್.ಯು.ಐ. ಎಲ್ಲಾ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ಗ್ರಾಮ ಪಂಚಾಯಿತಿ ಸದಸ್ಯರು, ಎಪಿಎಂಸಿ ಸದಸ್ಯರು, ತಾಲ್ಲೂಕು ಪಂಚಾಯಿತಿ ಸದಸ್ಯರು ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯರು ಮತ್ತು ಮಹಾನಗರ ಪಾಲಿಕೆ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನೇಶ್.ಕೆ.ಶೆಟ್ಟಿರವರು ತಿಳಿಸಿದ್ದಾರೆ.
