ನ್ಯಾಮತಿ : ತಂತ್ರಜ್ಞಾನ ವೇಗವಾಗು ಬೆಳೆದಂತೆ ಇಂದಿನ ಯುವ ಜನಾಂಗದಲ್ಲಿ ಧಾರ್ಮಿಕ ನಂಬಿಕೆಗಳು,ಆಚರಣೆಗಳು ಕಡಿಮೆಯಾಗುತ್ತಿದ್ದು, ಮಕ್ಕಳಲ್ಲಿ ಸಣ್ಣ ವಯಸ್ಸಿನಲ್ಲಿಯೇ ಸಂಸ್ಕಾರಯುತ ಜೀವನ ಮೌಲ್ಯಗಳ ಬಗ್ಗೆ ತಿಳುವಳಿಕೆ ನೀಡುವಲ್ಲಿ ಪೋಷಕರ ಪಾತ್ರ ಅತ್ಯಂತ ಮಹತ್ವವಾದದ್ದು ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ಪಟ್ಟಣದ ಎಪಿಎಂಸಿ ಆವರಣದಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸಂಸ್ಥೆ ವತಿಯಿಂದ ಹಮ್ಮಿಕೊಂಡಿದ್ದ ಸಾಮೂಹಿಕ ಸತ್ಯನಾರಾಯಣ ಪೂಜೆ ಕಾರ್ಯಕ್ರಮವನ್ನುಉದ್ಘಾಟಿಸಿ ಅವರು ಮಾತನಾಡಿದರು.
ಮನುಷ್ಯ ಧರ್ಮದ ದಾರಿಯಲ್ಲಿ ನಡೆದಾಗ ಭಗವಂತನ ಅನುಗ್ರಹ ಪ್ರಾಪ್ತವಾಗುತ್ತದೆ ಎಂದ ಶಾಸಕರು, ಧರ್ಮಸ್ಥಳದ ಧರ್ಮಾಧಿಕಾರಿಗಳು ಪ್ರತಿ ಹಳ್ಳಿ ಹಳ್ಳಿಗಳಲ್ಲೂ ಇಂತಹ ಕಾರ್ಯಕ್ರಮಗಳನ್ನು ನಡೆಸಿ ಜನರಲ್ಲಿ ಧಾರ್ಮಿಕ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆಂದರು.
ಧರ್ಮಸ್ಥಳ ಅತ್ಯಂತ ಪವಿತ್ರವಾದ ಕ್ಷೇತ್ರವಾಗಿದ್ದು, ಲೋಕಕಲ್ಯಾಣಕ್ಕಾಗಿ ನಡೆಯುತ್ತಿರುವ ಈ ಸಾಮೂಹಿಕ ಸತ್ಯನಾರಾಯಣ ಪೂಜೆಯಿಂದ ಲೋಕಕ್ಕೆ ಒಳ್ಳೆಯದಾಗಲಿ ಎಂದು ಪ್ರಾರ್ಥಿಸುತ್ತೇನೆಂದರು.
ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗಡೆಯವರು ಶಿಕ್ಷಣ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರಲ್ಲದೇ, ದುಡಿಯುವ ಕೈಗಳಿಗೆ ಸಾಲದ ಮೂಲಕ ಹಣ ನೀಡಿ ಅವರ ಕೈಗಳಿಗೆ ಉದ್ಯೋಗ ನೀಡುವ ಕೆಲಸವನ್ನು ಮಾಡುತ್ತಿದ್ದು ನಿಜಕ್ಕೂ ಶ್ಲಾಘನೀಯ ಎಂದರು.
ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರು ಧರ್ಮಸ್ಥಳಕ್ಕೆ ಭೇಟಿ ನೀಡಿದಾಗ ಧರ್ಮಾಧಿಕಾರಿಗಳಾದ ವೀರೆಂದ್ರ ಹೆಗಡೆಯವರ ಸೇವೆಯನ್ನು ನೋಡಿ, ಅವರ ಸೇವೆ ರಾಷ್ಟ್ರಮಟ್ಟದಲ್ಲೂ ಲಭಿಸುವಂತೆ ಮಾಡಲು ರಾಜ್ಯಸಭಾ ಸದಸ್ಯರಾನ್ನಾಗಿ ಮಾಡಿದ್ದಾರೆಂದರು.
ಸಾಮೂಹಿಕ ಸತ್ಯನಾರಾಯಣ ಪೂಜೆ : ಸಾಮೂಹಿಕ ಸತ್ಯನಾರಾಯಣ ಪೂಜೆಯಲ್ಲಿ 500 ಹೆಚ್ಚು ಮಹಿಳೆಯರು, 75 ಜೋಡಿ ವೃಥಾದಾರಿಗಳು ಪಾಲ್ಗೊಂಡು ಲೋಕಕಲ್ಯಾಣಕ್ಕಾಗಿ ಸಾಮೂಹಿಕ ಸತ್ಯನಾರಾಯಣ ಪೂಜೆ ನೆರವೇರಿಸಿ, ಲೋಕಕ್ಕೆ ಒಳ್ಳೆಯದಾಗಲೆಂದು ಪ್ರಾರ್ಥಿಸಿದರು.
ಈ ಸಂದರ್ಭ ಜಿಲ್ಲಾ ನಿದೇರ್ಶಕರಾದ ವಿಜಯ್ ಕುಮಾರ್ ನಾಗನಾಳ್ ಮಾತನಾಡಿದರೇ, ಧಾರ್ಮಿಕ ಉಪನ್ಯಾಸವನ್ನು ಉಮಾಪತಿ ನೆರವೇರಿಸಿದರು. ಈ ವೇಳೆ ಮಾಜಿ ಶಾಸಕ ಡಿ.ಬಿ.ಗಂಗಪ್ಪ, ಶ್ರೀಮಂಜೂಳಾ, ಗೌರವಾಧ್ಯಕ್ಷೆ ಭಾರತಿ,ಯೋಜನಾಧಿಕಾರಿ ಬಸವರಾಜ್, ಶಿಶಿಧರ್ ಸೇರಿದಂತೆ ಮತ್ತೀತತರರಿದ್ದರು.