ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2022-23ನೇ ಸಾಲಿಗೆ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಯಡಿ ವಿದ್ಯಾರ್ಥಿವೇತನ ನೀಡಲು ಆನ್ಲೈನ್ ಅರ್ಜಿ ಆಹ್ವಾನಿಸಿದೆ.
ಅಭ್ಯರ್ಥಿಗಳು ಕರ್ನಾಟಕ ರಾಜ್ಯ ನಿವಾಸಿಯಾಗಿದ್ದು, ಗ್ರಾಮೀಣ ಪ್ರದೇಶದವರಾಗಿರಬೇಕು. ವ್ಯಾಸಂಗ ಮಾಡುತ್ತಿರುವ ಕಾಲೇಜಿನಿಂದ ಕನಿಷ್ಠ 5 ಕಿ.ಮೀ ದೂರದವರಾಗಿರಬೇಕು. ವಿದ್ಯಾರ್ಥಿಗಳ ಪೆÇೀಷಕರ ವಾರ್ಷಿಕ ಗರಿಷ್ಠ ಆದಾಯ ಪ್ರವರ್ಗ-1ರ ವಿದ್ಯಾರ್ಥಿಗಳಿಗೆ ರೂ. 2.50 ಲಕ್ಷ ಹಾಗೂ ಇತರೆ ವಿದ್ಯಾರ್ಥಿಗಳಿಗೆ ರೂ.2.00 ಲಕ್ಷ ಮೀರಿರಬಾರದು. ಆಯಾ ವರ್ಷದಲ್ಲಿ ಲಭ್ಯವಿರುವ ಅನುದಾನಕ್ಕೆ ಸೀಮಿತಗೊಳಿಸಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಆಸಕ್ತರು ಇಲಾಖೆಯ ವೆಬ್ಸೈಟ್ hಣಣಠಿs://sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಅಕ್ಟೋಬರ್ 20 ರೊಳಗಾಗಿ ಸಲ್ಲಿಸಬಹುದಾಗಿದೆ.