ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಶಾಸಕರಾದ ಎಂ.ಪಿ ರೇಣುಕಾಚಾರ್ಯ ರವರು ಸೆ.24 ರಂದು ಬೆಳಿಗ್ಗೆ 11 ಗಂಟೆಗೆ ಒಳಾಂಗಣ ಕ್ರೀಡಾಂಗಣ, ಹೊನ್ನಾಳಿಯಲ್ಲಿ ಜಿಲ್ಲಾ ಮಟ್ಟದ ಶಟಲ್ ಬ್ಯಾಟ್‍ಮಿಟನ್ ಪಂದ್ಯಾವಳಿಯನ್ನು ಉದ್ಘಾಟಿಸುವರು. ಮ.12 ಗಂಟೆಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂWದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಮತ್ತು ನೌಕರರ ವಿವಿದೋದ್ದೇಶ ಸಹಕಾರಿ ಸಂಘ ನಿ., ಹೊನ್ನಾಳಿ ಇವರ ವತಿಯಿಂದ ಆಯೋಜಿಸಿರುವ 2021-22ನೇ ಸಾಲಿನ 9ನೇ ವರ್ಷದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಭಾಗವಹಿಸುವರು.ಮ.01 ಗಂಟೆಗೆ ದಾವಣಗೆರೆ, ನ್ಯಾಮತಿ, ಬೀಜೋಗಟ್ಟೆಯಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಸೆ.25 ರಂದು ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳ ವ್ಯಾಪ್ತಿಯಲ್ಲಿನ ಗ್ರಾಮಗಳಿಗೆ ಭೇಟಿ ನೀಡಿ, ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವರು.
ಸೆ.26 ರಂದು ಬೆ.10.30 ಕ್ಕೆ ಹೊನ್ನಾಳಿ ತಾಲ್ಲೂಕಿನ ನೇರಲಗುಂಡಿ ಗ್ರಾಮದಲ್ಲಿ ಪ್ರಾಥಮಿಕ ಶಾಲಾ ಮಕ್ಕಳ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬೆ.11.45 ಕ್ಕೆ ನ್ಯಾಮತಿ ತಾಲ್ಲೂಕಿನ ದಾನಿಹಳ್ಳಿ ಗ್ರಾಮದಲ್ಲಿ ಪ್ರೌಢಶಾಲಾ ಮಕ್ಕಳ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮ.12.45ಕ್ಕೆ ನ್ಯಾಮತಿ ಪಟ್ಟಣ ಪಂಚಾಯತಿ ಕಾರ್ಯಾಲಯದಲ್ಲಿ ಪೌರಸೇವಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮ.2.15 ಕ್ಕೆ ಹೊನ್ನಾಳಿ ಪುರಸಭಾ ಕಾರ್ಯಾಲಯ ಪೌರಸೇವಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮ.4 ಗಂಟೆಗೆ ಹೊನ್ನಾಳಿಯಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹವಾಲುಗಳನ್ನು ಸ್ವೀಕರಿಸುವರು. ಸಂ.6.30 ಕ್ಕೆ ಹೊನ್ನಾಳಿ ತಾಲ್ಲೂಕಿನ ಕುಂಬಳೂರು ಗ್ರಾಮದಲ್ಲಿ ನಡೆಯುವ ದಸರಾ ಶರನ್ನವರಾತ್ರಿ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವುದು. ರಾತ್ರಿ.7.40 ಕ್ಕೆ ಹೊನ್ನಾಳಿ ತಾಲ್ಲೂಕಿನ ಕುಂದೂರು ಗ್ರಾಮದಲ್ಲಿ ನಡೆಯುವ ಶ್ರೀ ಆಂಜನೇಯಸ್ವಾಮಿಯ 58 ನೇ ಶರನ್ನವರಾತ್ರಿ ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ರಾತ್ರಿ.9 ಗಂಟೆಗೆ ಹೊನ್ನಾಳಿಯ ಹಿರೇಕಲ್ಮಠದಲ್ಲಿ ನಡೆಯುವ ದಸರಾ ಶರನ್ನವರಾತ್ರಿ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಹೊನ್ನಾಳಿಯಲ್ಲಿ ವಾಸ್ತವ್ಯ.ಹೂಡುವರು.
ಸೆ.27 ರಂದು ಹೊನ್ನಾಳಿಯ ಅಂಬೇಡ್ಕರ್ ಭವನದಲ್ಲಿ ಪೌಷ್ಠಿಕ ಆಹಾರ ಅಭಿಯಾನ ಹಾಗೂ ಪೌಷ್ಠಿಕ ಆಹಾರ ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮ.01 ಗಂಟೆಗೆ ಬೆಂಗಳೂರಿಗೆ ತೆರುಳುವರೆಂದು ಅವರ ಅಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *