ನ್ಯಾಮತಿ ತಾಲ್ಲೂಕು ಕಸಾಪ ಪದಾಧಿಕಾರಿಗಳು ಬೆಂಗಳೂರಿನ ವಿಧಾನಸೌಧದಲ್ಲಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ನೇತೃತ್ವದಲ್ಲಿ ಕನ್ನಡ ಸಂಸ್ಕøತಿ ಸಚಿವ
ಸುನೀಲ ಕುಮಾರ ಅವರನ್ನು ಭೇಟಿ ಮಾಡಿ ನ್ಯಾಮತಿಯಲ್ಲಿ ಕನ್ನಡ ಭವನ ನಿರ್ಮಾಣ ಮಾಡಲು ಅನುದಾನ ನೀಡುವಂತೆ ಮನವಿ ಅರ್ಪಿಸಲಾಯಿತು.

ನ್ಯಾಮತಿ:
ನೂತನ ನ್ಯಾಮತಿ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನೂತನ ಕನ್ನಡ ಭವನ ನಿರ್ಮಾಣ ಮಾಡಲು ಅನುದಾನ ಬಿಡುಗಡೆ ಮಾಡುವುದಾಗಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಹಾಗೂ ಇಂಧನ ಸಚಿವ ಸುನೀಲ್‍ಕುಮಾರ್ ಅವರು ಭರವಸೆ ನೀಡಿದರು.
ವಿಧಾನಸೌಧದಲ್ಲಿ ಶಾಸಕ ಎಂ.ಪಿ.ರೇಣುಕಾಚಾರ್ಯಅವರ ನೇತೃತ್ವದಲ್ಲಿ ನ್ಯಾಮತಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಪದಾಧಿಕಾರಿಗಳು ನೀಡಿದ ಮನವಿಯನ್ನು ಸ್ವೀಕರಿಸಿ ಅವರು ಭರವಸೆ ನೀಡಿದರು.
ಅದಕ್ಕೊ ಮೊದಲು ಬೆಂಗಳೂರಿನಲ್ಲಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರನ್ನು ಮನೆಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು. ಸಚಿವರು ಮತ್ತು ಶಾಸಕರು ಉತ್ತಮವಾಗಿ ಸ್ಪಂದಿಸಿದ್ದಾರೆ ಎಂದು ಕಸಾಪ ಅಧ್ಯಕ್ಷ ಡಿ.ಎಂ.ಹಾಲಾರಾಧ್ಯ ತಿಳಿಸಿದರು.
ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ನಾಡೋಜ ಮಹೇಶಜೋಷಿ ಅವರನ್ನು ಕಚೇರಿಯಲ್ಲಿ ಭೇಟಿ ಮಾಡಿ ನೋಂದಣಿ, ನವೀಕರಣ ಸದಸ್ಯತ್ವ ಬಗ್ಗೆ ಮಾಹಿತಿ ಪಡೆಯಲಾಯಿತು.
ನಿಯೋಗದಲ್ಲಿ ನಿಕಟಪೂರ್ವ ಅಧ್ಯಕ್ಷ ಜಿ.ನಿಜಲಿಂಗಪ್ಪ, ಪ್ರಧಾನ ಕಾರ್ಯದರ್ಶಿ ಎಸ್.ಜಿ.ಬಸವರಾಜಪ್ಪ, ಕೋಶಾಧ್ಯಕ್ಷ ಕೆ.ಎಂ.ಬಸವರಾಜ, ನಿರ್ದೇಶಕರಾದ ವೆಂಕಟೇಶನಾಯ್ಕ, ರಾಮೇಶ್ವರ ಚಂದ್ರೇಗೌಡ, ಜಿ.ಪಿ.ಚಂದನ್, ಡಿ.ಎಂ.ವಿಜೇಂದ್ರ ಮಹೇಂದ್ರಕರ, ಬಂಡಿ ಈಶ್ವರಪ್ಪ, ಕುಂಬಾರ ತೀರ್ಥಲಿಂಗಪ್ಪ, ಜಿ.ಕುಬೇರಪ್ಪ, ಬೆಳಗುತ್ತಿ ಸೋಮಸುಂದರರಾಜ ಅರಸ್ ಸಹ ಇದ್ದರು.

Leave a Reply

Your email address will not be published. Required fields are marked *