ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ದಿ ನಿಗಮದಿಂದ 2022-23ನೇ ಸಾಲಿಗೆ ಬೆಸ್ತ, ಅಂಬಿಗ/ಅಂಬಿ, ಗಂಗಾಮತ, ಕಬ್ಬಲಿಗ, ಕೋಲಿ, ಮೊಗವೀರ ಮತ್ತು ಉಪ ಜಾತಿಗಳಿಗೆ ಒಳಪಡುವ ಅರ್ಹ ಫಲಾಪೇಕ್ಷಿಗಳಿಂದ ಗಂಗಾ ಕಲ್ಯಾಣ ನೀರಾವರಿ ಯೋಜನೆ ಮತ್ತು ಅರಿವು ಶೈಕ್ಷಣಿಕ ಸಾಲ (ಹೊಸತು ಮತ್ತು ನವೀಕರಣ) ಯೋಜನೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಯೋಜನೆಗಳಿಗೆ ಅರ್ಜಿಗಳನ್ನು ಸೇವಾ ಸಿಂಧು ಪೆÇೀರ್ಟಲ್ ಮುಖಾಂತರ ನವೆಂಬರ್ 9 ರೊಳಗೆ ಸಲ್ಲಿಸಬಹುದಾಗಿದೆ.
ಗಂಗಾ ಕಲ್ಯಾಣ ನೀರಾವರಿ ಈ ಯೋಜನೆಯಡಿ ಸಣ್ಣ ಮತ್ತು ಅತಿ ಸಣ್ಣ ರೈತರಾಗಿದ್ದು, 18 ರಿಂದ 60 ವರ್ಷದೊಳಗಿನ ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಕನಿಷ್ಟ 2 ಎಕರೆ ಜಮೀನು ಹೊಂದಿರಬೇಕು. ವಾರ್ಷಿಕ ವರಮಾನ ರೂ.98,000 ಮೀರಿರಬಾರದು.
ಅರಿವು ಶೈಕ್ಷಣಿಕ ಸಾಲ ಯೋಜನೆ(ಹೊಸತು)ಯಡಿ ಕರ್ನಾಟಕ ರಾಜ್ಯದಲ್ಲಿ ವೃತ್ತಿಪರ, ತಾಂತ್ರಿಕ ಇತ್ಯಾದಿ ಉನ್ನತ ವ್ಯಾಸಂಗಕ್ಕೆ ಶೈಕ್ಷಣಿಕ ಸಾಲದ ಮೊತ್ತಕ್ಕೆ ವಾರ್ಷಿಕವಾಗಿ ಶೇ.2ರ ಬಡ್ಡಿದರಲ್ಲಿ ಅರ್ಹ ಫಲಾನುಭವಿಗಳಿಂದ ಸೇವಾಸಿಂಧು ತಂತ್ರಾಂಶದ ಮೂಲಕ ಅರ್ಜಿ ಆಹ್ವಾನಿಸಿದೆ. ವಿದ್ಯಾರ್ಥಿಯ ವಯಸ್ಸು 35 ವರ್ಷ ಮೀರಿರಬಾರದು. ವಿದ್ಯಾರ್ಥಿಗಳು ಕುಟುಂಬದ ವಾರ್ಷಿಕ ವರಮಾನ ರೂ.3.50 ಲಕ್ಷಗಳಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಸರ್ಕಾರಿ ಕಾಲೇಜು/ಮಾನ್ಯತೆ ಪಡೆದ ಅನುದಾನಿತ ಮತ್ತು ಅನುದಾನ ರಹಿತ, ಖಾಸಗಿ ಕಾಲೇಜುಗಳಲ್ಲಿ ವೃತ್ತಿಪರ/ತಾಂತ್ರಿಕ/ಉನ್ನತ ವ್ಯಾಸಂಗದ ಕೋರ್ಸ್‍ಗಳಲ್ಲಿ ಸಿಇಟಿ ಮೂಲಕ ಪ್ರವೇಶ ಪಡೆದು ವ್ಯಾಸಂಗ ಮಾಡುತ್ತಿರಬೇಕು.
ಅರಿವು ಶೈಕ್ಷಣಿಕ ಸಾಲ ಯೋಜನೆ (ನವೀಕರಣ) ಯೋಜನೆಯಡಿ ಈಗಾಗಲೇ ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಸಾಲ ಪಡೆದಿರುವ ವಿದ್ಯಾರ್ಥಿಗಳು ಉಳಿದ 3 ಮತ್ತು 4 ಕಂತುಗಳ ಸಾಲ ಬಿಡುಗಡೆಗಾಗಿ ಸೇವಾಸಿಂಧು ಪೆÇೀರ್ಟಲ್ ಮುಖಾಂತರ ಆನ್‍ಲೈನ್ ಅರ್ಜಿ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ದಿ ನಿಗಮ, ಕುರುಬರ ಹಾಸ್ಟೆಲ್ ಕಟ್ಟಡ, ಹದಡಿ ರಸ್ತೆ, ಜಯದೇವ ಸರ್ಕಲ್ ಹತ್ತಿರ ದಾವಣಗೆರೆ 577002 ಅಥವಾ ನಿಗಮದ ವೆಬ್‍ಸೈಟ್ hಣಣಠಿ://ಚಿmbigಚಿಡಿಚಿಜeveಟoಠಿmeಟಿಣ.ಞಚಿಡಿಟಿಚಿಣಚಿಞಚಿ.gov.iಟಿ ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.