ಹೊನ್ನಾಳಿ : ಬೀದಿ ಬದಿ ವ್ಯಾಪಾರಿಗಳ ರಕ್ಷಣೆಗೆ ನಾನು ಬದ್ಧನಿದ್ದೇನೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ನಗರದ ಪುರಸಭೆ ಆವರಣದ ಕನಕದಾಸ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಕಲ್ಪವೃಕ್ಷ ಬೀದಿಬದಿ ವ್ಯಾಪಾರಸ್ಥರ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ನಾನು ಸದಾ ಬೀದಿ ಬದಿ ವ್ಯಾಪಾರಸ್ಥರ ರಕ್ಷಣೆ ಮಾಡುವ ಕೆಲಸ ಮಾಡುತ್ತಾ ಬಂದಿದ್ದೇನೆ ಎಂದ ಅವರು, ಬೀದಿ ಬದಿ ವ್ಯಾಪಾರಸ್ಥರ ಕಷ್ಟ ಏನೆಂದು ನನಗೆ ಗೊತ್ತಿದೆ ಎಂದರು.
ನಾನು ಕೂಡ ಈ ಹಿಂದೆ ಸಣ್ಣಪುಟ್ಟ ಬೀದಿಬದಿ ವ್ಯಾಪಾರ ಮಾಡಿದ್ದೆ ಎಂದು ಹಳೆಯ ನೆನಪನ್ನು ಮೆಲುಕು ಹಾಕಿದ ಶಾಸಕರು, ನಾನು ನಿಮ್ಮಗಳ ರಕ್ಷಣೆಗೆ ಸದಾ ಸಿದ್ದನಿದ್ದೇನೆ ಎಂದರು.
ಬೀದಿಬದಿಯಲ್ಲಿ ವ್ಯಾಪಾರ ಮಾಡುವವರು ಸುರಕ್ಷಿತವಾಗಿ ವ್ಯಾಪಾರ ಮಾಡುವಂತೆ ಮನವಿ ಮಾಡಿದ ಅವರು, ಸರ್ಕಾರದಿಂದ ಬೀದಿಬದಿ ವ್ಯಾಪಾರಸ್ಥರಿಗೆ ಬರುವ ಸವಲತ್ತುಗಳನ್ನು ನೀಡುವ ಕೆಲಸ ಮಾಡುತ್ತೇನೆ ನಾನು ಪ್ರಾಮಾಣಿಕವಾಗಿ ನಿಮ್ಮ ಪರವಾಗಿದ್ದೇನೆ ಎಂದು ಹೇಳಿದರು.
ನಾನು ಈ ಕ್ಷೇತ್ರದ ಶಾಸಕನಲ್ಲಾ, ನಾನು ನಿಮ್ಮಗಳ ಸೇವಕ ಸಾರ್ವಜನಿಕರು ಯಾವುದೇ ಸಮಯದಲ್ಲಿ ನನಗೆ ಕರೆ ಮಾಡಿದರೂ ನಾನು ನಿಮ್ಮನ್ನು ರಕ್ಷಣೆ ಮಾಡುವ ಕೆಲಸ ಮಾಡುತ್ತೇನೆ ಎಂದರು.
ಬೀದಿಬದಿ ವ್ಯಾಪಾರಸ್ಥರು ಸಾಕಷ್ಟು ಬೇಡಿಕೆಗಳನ್ನು ನನ್ನ ಮುಂದೆ ಇಟ್ಟಿದ್ದು ಪ್ರಾಮಾಣಿಕವಾಗಿ ಅವುಗಳನ್ನು ಈಡೇರಿಸುವ ಕೆಲಸ ಮಾಡುತ್ತೇನೆ ಎಂದರು.
ಈ ಸಂದರ್ಭದಲ್ಲಿ ಸರ್ಕಲ್ ಸಿಪಿಐ ಸಿದ್ದೇಗೌಡ, ಪುರಸಭೆ ಉಪಾಧ್ಯಕ್ಷೆ ರಂಜಿತಾವಡ್ಡಿಚನ್ನಪ್ಪ, ಮಾಜಿ ಪುರಸಭೆ ಅಧ್ಯಕ್ಷ ಬಾಬು ಓಬಳದಾರ್ ಇತರರು ಇದ್ದರು.