ಸ್ಲಂ ಜನಾಂದೋಲನ-ಕರ್ನಾಟಕ ಹಾಗೂ ಸಾವಿತ್ರಿ ಬಾಯಿ ಪುಲೆ ಮಹಿಳಾ ಸಂಘಟನೆ,ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಇವರ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 17 ರ ಸೋಮವಾರ ಬೆ.11.30ಕ್ಕೆ ರೋಟರಿ ಬಾಲಭವನದಲ್ಲಿ ಬಾಲ್ಯವಿವಾಹ, ಬಾಲಕಾರ್ಮಿಕ- ಮಾನವ ಕಳ್ಳ ಸಾಗಾಣಿಕೆ ಹಾಗೂ ಮಹಿಳಾ ದೌರ್ಜನ್ಯ ತಡೆ ಕಾಯ್ದೆ ಬಗ್ಗೆ ಮಾಹಿತಿ ಕಾರ್ಯಾಗಾರ ಏರ್ಪಡಿಸಲಾಗಿದೆ.
ಕಾರ್ಯಾಗಾರವನ್ನು ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರವೀಣ್ ನಾಯಕ ಉದ್ಘಾಟಿಸುವರು, ಸಾವಿತ್ರಿ ಬಾಪುಲೆ ಮಹಿಳಾ ಸಂಘಟನೆಯ ಉಪಾಧ್ಯಕ್ಷರಾದ ಮಂಜುಳಾ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಹಿರಿಯ ವಕೀಲರಾದ ಎಲ್.ಹೆಚ್ ಅರುಣ್‍ಕುಮಾರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಕೌಸರ್ ರೇಷ್ಮಾ, ಸಹಾಯಕ ಕಾರ್ಮಿಕ ಆಯುಕ್ತರಾದ ವೀಣಾ ಎಸ್.ಆರ್, ಮಹಿಳಾ ಮತ್ತು ಮಕ್ಕಳ ಸಂರಕ್ಷಣಾಧಿಕಾರಿ ಪೂರ್ಣಿಮಾ, ಕಾರ್ಮಿಕ ಅಧಿಕಾರಿ ಜಿ.ಇಬ್ರಾಹಿಂ ಸಾಬ್, ಸ್ಲಂ ಜನಾಂದೋಲನ ಗೌರವಾಧ್ಯಕ್ಷ ಎಂ.ಶಬ್ಬೀರ್ ಸಾಬ್, ಡಿಎಸ್4 ರಾಜ್ಯ ಕಾರ್ಯದರ್ಶಿ ಹೆಗ್ಗೆರೆ ರಂಗಪ್ಪ ಭಾಗವಹಿಸುವರು.
ಸ್ಲಂ ಜನಾಂದೋಲನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಣುಕಾ ಯಲ್ಲಮ್ಮ ಹಾವೇರಿ ಕಾರ್ಯಕ್ರಮವನ್ನು ನಿರೂಪಿಸುವರು ಎಂದು ಪ್ರಕಟಣೆ ತಿಳಿಸಿದೆ.