ಹೊನ್ನಾಳಿ ಅ 13: ಅವಳಿ ತಾಲ್ಲೂಕಿನ ವಿವಿಧ ಪ್ರಗತಿ ಪರ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ನಿನ್ನೆ ನಡೆದ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಮಳವಳ್ಳಿ ಪಟ್ಟಣದ 10 ವರ್ಷದ ಅಪ್ರಾಪ್ತ ವಯಸ್ಸಿನ ಕುಮಾರಿ ದಿವ್ಯಾಳ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಕಾಮುಕನಿಗೆ ಗಲ್ಲು ಶಿಕ್ಷೆ ವಿಧಿಸಬೇಕು,ಹಾಗೂ ಪದೇ ಪದೇ ರಾಜ್ಯದಲ್ಲಿ ಅಪ್ರಾಪ್ತ ಬಾಲಕಿಯರ ಮತ್ತು ಮಹಿಳೆಯರ ಮೇಲೆ ನಡೆಯುತ್ತಿರುವ ಈ ಕ್ರೂರ ಘಟನೆಗಳು ಕೊನೆಯಾಗಬೇಕು. ಹಾಗೂ ಸೂಕ್ತವಾದ ಕಾನೂನು ಕ್ರಮವನ್ನು ಗೋಮುಖ ವ್ಯಾಘ್ರನ ಮೇಲೆ ಕ್ರಮ ಕೈಗೊಳ್ಳಬೇಕೆಂದು ಮಾನ್ಯ ಘನತೆವೆತ್ತ ರಾಜ್ಯಪಾಲರಿಗೆ ಹೊನ್ನಾಳಿ ಉಪ ತಶೀಲ್ದಾರ್ ಮುಖಾಂತರ ಮನವಿ ಪತ್ರ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಅನೇಕ ಸಂಘ ಸಂಸ್ಥೆಗಳ ಅಧ್ಯಕ್ಷರು, ಮುಖಂಡರು,ವಿವಿಧ ಪರ ಸಂಘಟನೆ ಯವರು ಹಾಗೂ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಸಾರ್ವಜನಿಕರು ಸಹ ಭಾಗಿಯಾಗಿದ್ದರು,

Leave a Reply

Your email address will not be published. Required fields are marked *