ಜಿಲ್ಲಾ ಮೀನುಗಾರಿಕೆ ಉಪನಿರ್ದೇಶಕರ ಕಚೇರಿ ಹಾಗೂ ತಾಲ್ಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗಳನ್ನು ಅಕ್ಟೋಬರ್ 11 ರಿಂದ ಶಾಮನೂರು ರಸ್ತೆ, ಸಿದ್ದವೀರಪ್ಪ ಬಡಾವಣೆಯ ಬಾಪೂಜಿ ಅತಿಥಿ ಗೃಹ ಪಕ್ಕದ ಕೃಷಿ ತಂತ್ರಜ್ಞರ ಸಂಸ್ಥೆ(ರಿ) ದಾವಣಗೆರೆ ಇಲ್ಲಿಗೆ ಸ್ಥಳಾಂತರಿಸಲಾಗಿದೆ. ಸದರಿ ವಿಳಾಸಕ್ಕೆ ಪತ್ರ ವ್ಯವಹಾರ ನಡೆಸುವಂತೆ ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.