022ನೇ ಸಾಲಿನ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಅಕ್ಟೋಬರ್ 28 ರಂದು ‘ಕೋಟಿ ಕಂಠ ಗೀತ ಗಾಯನ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ
ನಾಡು-ನುಡಿಯ ಬಗ್ಗೆ ಅಭಿಮಾನ ಮೂಡಿಸುವ ನಮ್ಮ ಪರಂಪರೆಯ ಬಗ್ಗೆ ಹೆಮ್ಮೆ ಮೂಡಿಸುವ ಗೀತೆ, ಕವನಗಳನ್ನು ನಾಡಿನ ಹೆಮ್ಮೆಯ ಕವಿಗಳು ರಚಿಸಿದ್ದು ಇವುಗಳ ಕೇಳುವಿಕೆಯು ನಮ್ಮಲ್ಲಿ ಅಭಿಮಾನವನ್ನು ಮೂಡಿಸುತ್ತದೆ. ಈ ದೃಷ್ಟಿಯಿಂದ ಈ ಗೀತೆಗಳು ಕನ್ನಡದ ಶಕ್ತಿ ಕಳೆದ ರಾಜೋತ್ಸವದ ಸಂದರ್ಭದಲ್ಲಿ ಪ್ರಾತಿನಿಧಿಕವಾಗಿ ಆಯ್ದ 3 ಕನ್ನಡ ಗೀತೆಗಳ ಸಮೂಹ ಗಾಯನವನ್ನು ವಿನೂತನವಾಗಿ ಲಕ್ಷ ಕಂಠ ಗೀತ ಗಾಯನ ಶೀರ್ಷಿಕೆಯಡಿ ರಾಜ್ಯಾದ್ಯಂತ ಆಯೋಜಿಸಲಾಗಿದೆ.
ನನ್ನ ನಾಡು – ನನ್ನ ಹಾಡು ಸಮೂಹ ಗೀತ ಗಾಯನ ಅಕ್ಟೋಬರ್ 28 ರಂದು ಕನ್ನಡ ನಾಡು-ನುಡಿಯ ಶ್ರೇಷ್ಟತೆಯನ್ನು ಸಾರುವ ಸಲುವಾಗಿ ನಾಡಗೀತೆ, ಹುಯಿಲಗೋಳ ನಾರಾಯಣರಾಯರ ‘ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು, ರಾಷ್ಟ್ರಕವಿ ಕುವೆಂಪುರವರ ‘ಹಚ್ಚೇವು ಕನ್ನಡದ ದೀಪ, ನಾಡೋಜ ಡಾ. ಚೆನ್ನವೀರ ಕಣವಿಯವರ ವಿಶ್ವವಿನೂತನ ವಿದ್ಯಾಚೇತನ, ಡಾ. ಹಂಸಲೇಖರವರ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಈ ಗೀತೆಗಳನ್ನು ಬೆಳಗ್ಗೆ 11 ಗಂಟೆಗೆ ಏಕ ಕಾಲದಲ್ಲಿ ಹಾಡುವುದು ನಂತರ ಕನ್ನಡ ನಾಡು-ನುಡಿಯ ಹಿರಿಮೆಯನ್ನು ಸಾರುವ ಕನ್ನಡ ಗೀತೆಗಳ ಗಾಯನವನ್ನು ಮುಂದುವರಿಸಲಾಗುವುದು ಹಾಗೂ ಹಾಡುಗಳ ಸಾಹಿತ್ಯ ಹಾಗೂ ದಾಟಿಯನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಯುಟ್ಯೂಬ್ ಚಾನೆಲ್‍ನಲ್ಲಿ ಅಪ್‍ಲೋಡ್ ಮಾಡಲಾಗುವುದು.
ಕೋಟಿ ಕಂಠ ಗೀತೆ ಗಾಯನಕ್ಕೆ ನೋಂದಣಿ ಕಾರ್ಯಕ್ರಮದಲ್ಲಿ ಭಾಗವಹಿಸುವರನ್ನು ನೋಂದಾಯಿಸಿ ಭಾಗವಹಿಸಿದವರಿಗೆ ಸ್ವಯಂಚಾಲಿತ ಆನ್‍ಲೈನ್ ಪ್ರಮಾಣಪತ್ರ ನೀಡಲು ಉದ್ದೇಶಿಸಿದೆ ಅದರ ಅಂಗವಾಗಿ
ಅಕ್ಟೋಬರ್ 11 ರಿಂದ 28 ರವರೆಗೆ ನೋಂದಣಿ ಮಾಡಲು ಆಯೋಜಿಸಲಾಗಿದ್ದು ನೋಂದಾಣಿಗಾಗಿ ವೆಬ್‍ಸೈಟ್ hಣಣಠಿs://ಞಚಿಟಿಟಿಚಿಜಚಿsiಡಿi.ಞಚಿಡಿಟಿಚಿಣಚಿಞಚಿ.gov.iಟಿ/ಞಞg/ಠಿubಟiಛಿ/ ಸಂಪರ್ಕಿಸಬಹುದೆಂದು ತಿಳಿಸಿದ್ದಾರೆ.