ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಏರ್ಪಡಿಸಲಾಗಿರುವ ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್ ಹೇಳಿದರು.
ಮಂಗಳವಾರ ಜಿಲ್ಲಾಡಳಿತ ಭವನದ ಅಪರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ‘67 ನೇ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಹಮ್ಮಿಕೊಳ್ಳಲಾಗುವ ಕೋಟಿ ಕಂಠ ಗಾಯನ’ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಜ್ಯಾದ್ಯಂತ 67ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಏಕಕಾಲಕ್ಕೆ ಹಮ್ಮಿಕೊಳ್ಳಲಾಗಿರುವ ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ನಾಲ್ಕು ಲಕ್ಷ ಜನರು ಭಾಗವಹಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಗುವುದು. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಸ್ಥಳೀಯ ಸಂಸದರು, ಶಾಸಕರು, ಜನಪ್ರತಿನಿಧಿಗಳನ್ನು ಒಳಗೊಂಡಂತೆ ಜಿಲ್ಲೆಯ ಪ್ರತಿ ಗ್ರಾಮ ಪಂಚಾಯತಿಗಳಲ್ಲಿ ಕೂಡ ವ್ಯವಸ್ಥಿತವಾಗಿ ಕಾರ್ಯಕ್ರಮವನ್ನು ಆಯೋಜಿಸುವಂತೆ ಸೂಚನೆ ನೀಡಿದರು.
ಕಾರ್ಯಕ್ರಮವನ್ನು ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳು, ವಿಶ್ವವಿದ್ಯಾಲಯಗಳು, ಸರ್ಕಾರಿ ಕಚೇರಿಗಳಲ್ಲಿ ಅಕ್ಟೋಬರ್ 28 ರ ಬೆ.11 ಗಂಟೆಗೆ ಏಕಕಾಲಕ್ಕೆ ಪ್ರಾರಂಭಿಸಲಾಗುವುದು. ಕನ್ನಡ ನಾಡು ನುಡಿಯ ಶ್ರೇಷ್ಠತೆಯನ್ನು ಸಾರುವ ಒಟ್ಟು ಆರು ಕನ್ನಡ ಗೀತೆಗಳ ಗಾಯನ ನಡೆಯಲಿದೆ. ಸಾರ್ವಜನಿಕರು ಸ್ವಯಂಪ್ರೇರಿತವಾಗಿ ಭಾಗವಹಿಸಬಹುದು. ಈ ವೇಳೆ ಸಂಕಲ್ಪವಿಧಿ ಬೋಧಿಸಲಾಗುವುದು ಎಂದರು.
ಸಭೆಯಲ್ಲಿ ಹೆಚ್ಚುವರಿ ಪೆÇಲೀಸ್ ವರಿμÁ್ಠಧಿಕಾರಿ ಆರ್.ಬಸರಗಿ, ಆಹಾರ ನಾಗರಿಕ ಮತ್ತು ಸರಬರಾಜು ಇಲಾಖೆಯ ಜಂಟಿ ನಿರ್ದೇಶಕಿ ನಜ್ಮಾ ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.