ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯು 2022-23ನೇ ಸಾಲಿನಲ್ಲಿ ನ್ಯಾಷನಲ್ ಇ ಸ್ಕಾಲರ್‍ಶಿಪ್ ಪಡೆಯಲು ಈ ಕೆಳಕಂಡ ತರಗತಿಗಳಲ್ಲಿ ವಿದ್ಯಾಭ್ಯಾಸ ಮಾಡುವ ವಿಕಲಚೇತನ ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ ದಿನಾಂಕವನ್ನು ವಿಸ್ತರಿಸಲಾಗಿರುತ್ತದೆ. ಆದ್ದರಿಂದ ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್: hಣಣಠಿs://sಛಿhoಟಚಿಡಿshiಠಿs.gov.iಟಿ/ ಅನ್ನು ಸಂಪರ್ಕಿಸಬಹುದು. ಎಂದು ಡಾ|| ಕೆ.ಕೆ. ಪ್ರಕಾಶ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿಗಳು, ದಾವಣಗೆರೆ ತಿಳಿಸಿದ್ದಾರೆ.
ಮೆಟ್ರಿಕ್ ನಂತರದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಆನ್‍ಲೈನ್‍ನಲ್ಲಿ ಅರ್ಜಿಗಳನ್ನು ಸಲ್ಲಿಸಲು 31ನೇ ಅಕ್ಟೋಬರ್ 2022 ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿರುತ್ತದೆ. ಆದಾಯದ ಮಿತಿ 2.00 ಲಕ್ಷ ಆಗಿರುತ್ತದೆ.
ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳ ಕಛೇರಿ, ಶಂಕರಲೀಲಾ ಗ್ಯಾಸ್ ಏಜೆನ್ಸಿ ಹತ್ತಿರ, ಎಂ.ಸಿ.ಸಿ. ‘ಬಿ’ ಬ್ಲಾಕ್, ದಾವಣಗೆರೆ ಹಾಗೂ ವಿಕಲಚೇತನರ ಸಹಾಯವಾಣಿ ಮತ್ತು ಮಾಹಿತಿ ಸಲಹಾ ಕೇಂದ್ರದ ದೂರವಾಣಿ ಸಂಖ್ಯೆ 08192-263939 ವಿಕಲಚೇತನರ ಮಾಹಿತಿ ಸಲಹೆಗಾರರು ಜೆ. ದುರುಗೇಶ್ 9886477114, ನ್ನು ಸಂಪರ್ಕಿಸಬಹುದೆಂದು ತಿಳಿಸಿದ್ದಾರೆ.