ಭಾರತೀಯ ಸ್ಟೇಟ್ ಬ್ಯಾಂಕ್ ಮಂಡಿಪೇಟೆ ಶಾಖೆಯ ಆವರಣದಲ್ಲಿ ಅ.21 ಮತ್ತು 22 ರಂದು ಬೆಳಿಗ್ಗೆ 10.30ಕ್ಕೆ ಬೃಹತ್ ಸಾಲ ಮೇಳವನ್ನು ಆಯೋಜಿಸಲಾಗಿದೆ.
ಮೇಳದಲ್ಲಿ ಗೃಹ ಸಾಲ, ವಾಹನಸಾಲ, ಕಿರು ಸಣ್ಣ ಮತ್ತು ಮಾಧ್ಯಮ ಗಾತ್ರದ ಉದ್ಯಮಿಗಳಿಗೆ ಅತಿ ಕಡಿಮೆ ದರದಲ್ಲಿ ಪರಿಷ್ಕರಣ ಶುಲ್ಕವಿಲ್ಲದೆ ಸ್ಥಳದಲ್ಲಿಯೇ ಸಾಲವನ್ನು ಮಂಜೂರು ಮಾಡಲಾಗುವುದು ಎಂದು ಪ್ರಾದೇಶಿಕ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.