ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ (ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸುಗಳ ವಿದ್ಯಾರ್ಥಿಗಳು) ವಿದ್ಯಾರ್ಥಿನಿಲಯಗಳಿಗೆ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 3ಎ, 3ಬಿ, ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2022-23ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಪ್ರವರ್ಗ-1 ರೂ.2.50 ಲಕ್ಷ, ಪ್ರವರ್ಗ-2ಎ, 3ಎ, 3ಬಿ ಸೇರಿದ ಅಭ್ಯರ್ಥಿಗಳಿಗೆ ರೂ.1 ಲಕ್ಷ ಮಿತಿಯೊಳಗಿರಬೇಕು.
ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ನವೆಂಬರ್ 10ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಲು ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್ ತಿತಿತಿ.bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ ಊಒIS ನಲ್ಲಿ ನೋಡಬಹುದು
ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ಇ-ಮೇಲ್ bಛಿತಿಜ.hosಣeಟs@ಞಚಿಡಿಟಿಚಿಣಚಿಞಚಿ.gov.iಟಿ ಅಥವಾ 080-8050370006 ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.