ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಅಶ್ವಿನಿ, ತಪೋವನ ಮತ್ತು ಸುಶ್ರುತ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಗಳು, ಜಿಲ್ಲಾ ಯೋಗ ಒಕ್ಕೂಟ, ಆಯುರ್ವೇದ ಔಷಧಿ ಪ್ರತಿನಿಧಿಗಳು, ವಿತರಕರು ಮತ್ತು ಮಾರಾಟಗಾರರು ಇವರುಗಳ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 23 ರಂದು  ನಗರದ ಕುವೆಂಪು ಕನ್ನಡ ಭವನದಲ್ಲಿ  “ಪ್ರತಿ ದಿನ,  ಪ್ರತಿ ಮನೆಯಲ್ಲೂ ಆಯುರ್ವೇದ” ಎಂಬ ಘೋಷವಾಕ್ಯದೊಂದಿಗೆ 7 ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ(ಭೈರತಿ) ಉದ್ಘಾಟಿಸುವರು. ದಾವಣಗೆರೆ ಉತ್ತರ ವಿಧಾನಸಭಾ ಶಾಸಕ ಎಸ್.ಎ.ರವೀಂದ್ರನಾಥ್ ಅಧ್ಯಕ್ಷತೆಯನ್ನು ವಹಿಸುವರು.
ಇದೇ ವೇಳೆ “ಉಚಿತ ಆಯುರ್ವೇದ ಚಿಕಿತ್ಸಾ ಶಿಬಿರವನ್ನು” ಹಮ್ಮಿಕೊಂಡಿದ್ದು, ಸಾರ್ವಜನಿಕರಿಗೆ ಉಚಿತವಾಗಿ ಆರೋಗ್ಯ ತಪಾಸಣೆ ಮತ್ತು ಆಯುರ್ವೇದ ಚಿಕಿತ್ಸೆಯು ಲಭ್ಯವಿರುತ್ತದೆ ಎಂದು ಜಿಲ್ಲಾ ಆಯುಷ್ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *