ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ದಾವಣಗೆರೆ ಪಿ.ಬಿ.ರಸ್ತೆಯ ಅರುಣ ಚಿತ್ರಮಂದಿರದ ಎದುರಿನ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಅ.27 ಮತ್ತು 28 ರಂದು ಕುರಿ ಮತ್ತು ಮೆಕೆ ಸಾಕಾಣಿಕೆ ತರಬೇತಿ ಹಮ್ಮಿಕೊಳ್ಳಲಾಗಿದೆ.
ಈ ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ತರಬೇತಿಗೆ ಹಾಜರಾಗುವ ರೈತರು ಆಧಾರ್ ಕಾರ್ಡ್ ಪ್ರತಿ, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಪ್ರತಿ ತರಬೇಕು. ಹೆಚ್ಚಿನ ವಿವರಕ್ಕಾಗಿ ಪಶುವೈದ್ಯಕೀಯ ಸಹಾಯಕರ ತರಬೇತಿ ಕೇಂದ್ರ, ದಾವಣಗೆರೆ ದೂ.ಸಂ: 08192-233787 ಗೆ ಸಂಪರ್ಕಿಸುವುದು.