ದೀಪಾವಳಿ ಬೆಳಕಿನ ಹಬ್ಬ, ಎಲ್ಲರೂ ಸಂಭ್ರಮ ಹಾಗೂ ಸಡಗರದಿಂದ ಆಚರಿಸುವ ಹಬ್ಬವಾಗಿರುವುದರಿಂದ ಪಟಾಕಿಗಳನ್ನು ಬಳಸುವಾಗ ಎಚ್ಚರವಹಿಸಬೇಕು. ಸ್ವಲ್ಪ ಮೈಮರೆತಲ್ಲಿ ಜೀವನದ ಬೆಳಕನ್ನೇ ಕಸಿದುಕೊಳ್ಳಬಹುದು. ಹಬ್ಬವನ್ನು ಜಾಗರೂಕತೆ ಹಾಗೂ ಸುರಕ್ಷತೆಯಿಂದ ಆಚರಿಸುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮನವಿ ಮಾಡಿದೆ.
ಅಪಾರ್ಟ್ ಮೆಂಟ್, ವಠಾರ, ನೆರೆಹೊರೆ ಮನೆಯವರು ಒಂದೆಡೆ ಕಲೆತು, ಶಾಶ್ವತ ಕುರುಡತನ, ಕಿವುಡುತನಗಳಿಗೆ ಎಡೆಮಾಡಿಕೊಡದೆ ಹಾಗೂ ಗಿಡ-ಮರಗಳು ಮತ್ತು ಪ್ರಾಣಿ-ಪಕ್ಷಿಗಳಿಗೆ ಯಾವುದೇ ಹಾನಿಯಾಗದಂತೆ ಎಚ್ಚರವಹಿಸಬೇಕು.
ಪಟಾಕಿಗಳಿಂದ ಕಳೆದ ದಶಕದಲ್ಲಿ ಸುಮಾರು ಸಾವಿರಾರು ಮಂದಿ ಪಟಾಕಿ ಸಿಡಿತದಿಂದ ಗಾಯಗೊಂಡಿದ್ದು, ಈ ಪೈಕಿ ಶೇ.70 ರಷ್ಟು ಗಾಯಾಳುಗಳದ್ದು ಕಣ್ಣಿಗೆ ಸಂಬಂಧಿಸಿದ ಗಾಯಗಳಾಗಿವೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ವಾಯು ಹಾಗೂ ಶಬ್ದ ಮಾಲಿನ್ಯ ಮಟ್ಟ ಶೇ.10 ರಿಂದ ಶೇ.15 ರಷ್ಟು ಹೆಚ್ಚಾಗಿ ಪಟಾಕಿಗಳು ಹೊರಸೂಸುವ ವಿಷಯುಕ್ತ ಅನಿಲ ಆರೋಗ್ಯ ಸಂಬಂಧಿತ ಕಾಯಿಲೆಗಳು ಹಾಗೂ ಪರಿಸರ ಮಾಲಿನ್ಯಕ್ಕೆ ಕಾರಣವಾಗುತ್ತವೆ. ಪಟಾಕಿಗಳ ಸಿಡಿತದ ನಂತರ ಉತ್ಪತ್ತಿಯಾಗುವ ಘನ ತ್ಯಾಜ್ಯದ ಹೆಚ್ಚಳದಿಂದ ನಗರದ ಶುಚಿತ್ವದ ಸಮಸ್ಯೆ ಉಲ್ಬಣವಾಗುವುದು.
ಪಟಾಕಿ ಸಿಡಿತದ ದುಷ್ಪರಿಣಾಮಗಳು : ಶಬ್ದ ಮತ್ತು ವಾಯು ಮಾಲಿನ್ಯಗಳಲ್ಲಿ ವೈಪರೀತ್ಯ, ಶಾಶ್ವತ ಕುರುಡುತನ, ಕಿವುಡುತನ, ಅಸ್ವಸ್ಥರು, ಮಕ್ಕಳು, ಗರ್ಭಿಣಿಯರು ಮತ್ತು ವೃದ್ಧರ ಆರೋಗ್ಯದಲ್ಲಿ ಏರು-ಪೇರು, ಗಿಡ-ಮರಗಳು ಮತ್ತು ಪಾಣಿ-ಪಕ್ಷಿಗಳಿಗೆ ಸಂಚಕಾರ, ಸ್ಫೋಟಕ-ಪಟಾಕಿಗಳ ಸದ್ದಿನಿಂದ ಒತ್ತಡ, ನಿದ್ರಾಹೀನತೆ, ಕಿವುಡುತನ, ರಕ್ತದೊತ್ತಡ, ಹೃದಯಘಾತ ಮುಂತಾದ ಅಪಾಯಗಳು ಉಂಟಾಗುತ್ತವೆ.
ಸಾರ್ವಜನಿಕರು 125 ಡೆಸಿಬಲ್‍ಗೂ (ಶಬ್ದದ ಪ್ರಮಾಣ) ಮೇಲ್ಪಟ್ಟ ಪಟಾಕಿಗಳ ಸಿಡಿತವನ್ನು ನಿμÉೀಧಿಸಲಾಗಿದ್ದು, ರಾತ್ರಿ 10 ರಿಂದ ಬೆಳಿಗ್ಗೆ 6 ಗಂಟೆ ನಡುವೆ ಪಟಾಕಿ ಸಿಡಿಸುವುದನ್ನು ಮತ್ತು ಆಸ್ಪತ್ರೆ, ವೃದ್ಧಾಶ್ರಮಗಳ ಹತ್ತಿರ ಪಟಾಕಿ ಸಿಡಿಸಬಾರದದೆಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *