ಸಂವಿಧಾನದ ಮೌಲ್ಯಗಳನ್ನು ಕಾಪಾಡುವಲ್ಲಿ ಪೊಲೀಸರ ಪಾತ್ರ ಮಹತ್ವದ್ದಾಗಿದೆ ; ಜಿಲ್ಲಾಧಿಕಾರಿ ಶಿವಾನಂದ ಕಾಪಶಿ
ದಾವಣಗೆರೆ ಅ.21
ದೇಶದ ಸಂವಿಧಾನದ ಮೌಲ್ಯಗಳನ್ನು ರಕ್ಷಿಸಲು ಹೋರಾಡಿ ಹುತಾತ್ಮರಾದ ಪೆÇಲೀಸರ ತ್ಯಾಗ ಮತ್ತು ಬಲಿದಾನ ಸದಾ ಸ್ಮರಣೀಯವಾದದು ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಾಶಿ ಹೇಳಿದರು.
ಶುಕ್ರವಾರ ಜಿಲ್ಲಾ ಪೆÇಲೀಸ್ ಇಲಾಖೆ ವತಿಯಿಂದ ಜಿಲ್ಲಾ ಪೆÇಲೀಸ್ ಕವಾಯತು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೆÇಲೀಸ್ ಹುತಾತ್ಮರ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
ಸಂವಿಧಾನದ ಮೌಲ್ಯಗಳನ್ನು ಕಾಪಾಡುವಲ್ಲಿ ಪೊಲೀಸರ ಪಾತ್ರ ಮಹತ್ವವಾದ್ದು, ದೇಶಾದ್ಯಂತ ಕಳೆದ ಒಂದು ವರ್ಷದಲ್ಲಿ 260 ಸಮವಸ್ತ್ರಧಾರಿ ಪೆÇಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕರ್ತವದಲ್ಲಿರುವಾಗಲೇ ಹುತಾತ್ಮರಾಗಿದ್ದಾರೆ. ಮುಂದಿನ ದಿನಗಳಲ್ಲಿ ಈ ರೀತಿಯ ಬಲಿದಾನಗಳು ಕಡಿಮೆಯಾಗಲಿ ಎಂದು ಆಶಿಸಿದ ಅವರು, ರಕ್ಷಣಾ ಕಾರ್ಯದಲ್ಲಿ ತೊಡಗಿಕೊಳ್ಳುವ ಪೆÇಲೀಸರಿಗೆ ಆಧುನಿಕತೆಗೆ ತಕ್ಕಂತೆ ರಕ್ಷಣಾ ಶಸ್ತ್ರಾಸ್ತ್ರಗಳು ದೊರಕುವಂತಾಗಲಿ ಎಂದರು.
ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಸಿ.ಬಿ ರಿಷ್ಯಂತ್ ಮಾತನಾಡಿ, ಚೀನಾ-ಭಾರತ ಗಡಿ ಭಾಗದ ಹಾಟ್ ಸ್ಟ್ರೀಗ್ ಪೆÇೀಸ್ಟ್ ಹತ್ತಿರ 1959ರ ಅ.21ರಂದು ಸಿಆರ್‍ಪಿಎಫ್ ಡಿಎಸ್‍ಪಿ ಕರಣಸಿಂಗ್ ನೇತೃತ್ವದಲ್ಲಿ ಪೆÇಲೀಸ್ ದಳವು ಪಹರೆ ಕರ್ತವ್ಯ ನಿರ್ವಹಿಸುತ್ತಿದ್ದಾಗ ಆಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿರುವ ಚೀನಾ ಸೈನಿಕರಿಂದ ಏಕಾಏಕಿ ದಾಳಿ ನಡೆಸಲಾಗುತ್ತದೆ. ಆ ಸಂದರ್ಭದಲ್ಲಿ ವೈರಿಗಳ ದಾಳಿಗೆ ವಿಚಲಿತರಾಗದೆ ತಮ್ಮ ಪ್ರಾಣದ ಹಂಗು ತೊರೆದು ಕೊನೆಯುಸಿರಿನವರೆಗೂ ಧೈರ್ಯದಿಂದ ಹೋರಾಡಿ ಪ್ರಾಣ ತೆತ್ತ 10 ಭಾರತೀಯ ಪೆÇಲೀಸ್ ಯೋಧರ ಬಲಿದಾನದ ಸ್ಮರಣೆ ಪ್ರತೀಕವಾಗಿ ಪ್ರತಿ ವರ್ಷ ಅ.21ರಂದು ದೇಶಾದ್ಯಂತ ಪೆÇಲೀಸ್ ಹುತಾತ್ಮರ ದಿನ ಆಚರಿಸಲಾಗುತ್ತದೆ. ಕಳೆದ ಒಂದು ವರ್ಷದಲ್ಲಿ ದೇಶಾದ್ಯಂತ ಕರ್ತವ್ಯದ ವೇಳೆ ಹುತಾತ್ಮರಾದ 260 ರಲ್ಲಿ ರಾಜ್ಯದಲ್ಲಿ 11 ಜನ ಪೆÇಲೀಸರು ಮಾಡಿದ ತ್ಯಾಗ, ಬಲಿದಾನವನ್ನು ಸ್ಮರಿಸಿದರು.


ಈ ವೇಳೆ ಪೂರ್ವ ವಲಯ ಪೆÇಲೀಸ್ ಮಹಾನಿರೀಕ್ಷಕ ತ್ಯಾಗರಾಜನ್, ಮಹಾನಗರ ಪಾಲಿಕೆ ಮೇಯರ್ ಜಯಮ್ಮ ಗೋಪಿನಾಯ್ಕ್ ಸೇರಿದಂತೆ ವಿವಿಧ ಗಣ್ಯರು ಹಾಗೂ ಅಧಿಕಾರಿಗಳು ಪೆÇಲೀಸ್ ಹುತಾತ್ಮರ ಸ್ಮಾರಕಕ್ಕೆ ಹೂಗುಚ್ಚ ಅರ್ಪಿಸಿ ನಮನ ಸಲ್ಲಿಸಿದರು. ವಾಲಿ ಫೈರಿಂಗ್ ಹಾಗೂ ಪೆÇಲೀಸ್ ಧ್ವಜ ಅರ್ಧಕ್ಕೆ ಇಳಿಸಿ, 2 ನಿಮಿಷ ಮೌನಾಚರಣೆ ಮಾಡುವ ಮೂಲಕ ಹುತಾತ್ಮ ಪೆÇಲೀಸರಿಗೆ ಗೌರವ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಪೂರ್ವ ವಲಯ ಪೆÇಲೀಸ್ ಮಹಾನಿರೀಕ್ಷಕ ಡಾ.ತ್ಯಾಗರಾಜನ್ ಅಧ್ಯಕ್ಷತೆ ವಹಿಸಿದ್ದರು. ಹೆಚ್ಚುವರಿ ಪೆÇಲೀಸ್ ಅಧೀಕ್ಷಕ ರಾಮಗೊಂಡ ಬಸರಗಿ, ಕರ್ನಾಟಕ ಲೋಕಾಯುಕ್ತ ಪೆÇಲೀಸ್ ಅಧೀಕ್ಷಕ ಎಂ.ಎಸ್ ಕೊಲ್ಲಾಪುರಿ, ಗ್ರಾಮಾಂತರ ಉಪವಿಭಾಗ ಎ.ಎಸ್.ಪಿ ಕನ್ನಿಕಾ ಸಕ್ರಿವಾಲ್ ಸೇರಿದಂತೆ ವಿವಿಧ ಅಧಿಕಾರಿಗಳು, ಪೆÇಲೀಸ್ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *