ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ರವರು ಅ.28 ರಂದು ಬೆಳಗ್ಗೆ 10 ಗಂಟೆಗೆ ಹೊನ್ನಾಳಿಯಲ್ಲಿ ಆಯೋಜಿಸಿರುವ ‘ಕೋಟಿ ಕಂಠ ಗಾಯನ’ ಕಾರ್ಯಕ್ರಮದಲ್ಲಿ ಭಾಗವಹಿಸುವರು ಮ.01.30 ಕ್ಕೆ ಕುಳಗಟ್ಟೆ, ಸಾಸ್ವೆಹಳ್ಳಿ, ಸವಳಂಗ ಮತ್ತು ಮಂಗನಕೊಪ್ಪ-ಚಟ್ನಹಳ್ಳಿ ಗ್ರಾಮಗಳಲ್ಲಿ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು.ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂ.08 ಕ್ಕೆ ಹೊನ್ನಾಳಿಗೆ ಪ್ರಯಾಣ ಮತ್ತು ವಾಸ್ತವ್ಯ.
ಅ.29 ರಂದು ಬೆ.11 ಕ್ಕೆ ನ್ಯಾಮತಿ ಪಟ್ಟಣದಲ್ಲಿ ಉಚಿತ ವಯದ್ಯಕೀಯ ತಪಾಸಣಾ ಶಸ್ತ್ರ ಚಿಕಿತ್ಸಾ ಶಿಬಿರದ ಉದ್ಘಾಟನೆ ನೆರವೇರಿಸುವರು. ಬೆ.11.30 ರಿಂದ ಮ.12 ಗಂಟೆಯ ವರೆಗೆ ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ಮ.01 ಕ್ಕೆ ಹೊನ್ನಾಳಿ ತಾಲ್ಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ನಡೆಯುವ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸ.05 ಕ್ಕೆ ಹೊನ್ನಾಳಿ ಪಟ್ಟಣದಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸ.07 ಕ್ಕೆ ಹೊನ್ನಾಳಿ ತಾಲ್ಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಗ್ರಾಮ ವಾಸ್ತವ್ಯದ ಕಾರ್ಯಕ್ರಮದ ಆಂಗವಾಗಿ ಆಯೋಜಿಸಿರುವ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಭಾಗವಹಿಸುವರು ನಂತರ ಹೊನ್ನಾಳಿಗೆ ಪ್ರಯಾಣ ಮತ್ತು ವಾಸ್ತವ್ಯ.
ಅ.30 ರಂದು ಬೆ.11 ಗಂಟೆಯಿಂದ ಸಂಜೆ 05 ರವರೆಗೆ ವಿವಿಧ ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು ನಂತರ ಹೊನ್ನಾಳಿಗೆ ಪ್ರಯಾಣ ಮತ್ತು ವಾಸ್ತವ್ಯ.
ಅ.31 ರಂದು ಬೆ.11 ಗಂಟೆಯಿಂದ ಸಂಜೆ 07 ರವರೆಗೆ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನ ವ್ಯಾಪ್ತಿಯ ಗ್ರಾಮಗಳಲ್ಲಿ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು. ನಂತರ ಹೊನ್ನಾಳಿಗೆ ಪ್ರಯಾಣ ಮತ್ತು ವಾಸ್ತವ್ಯ.
ನ.01 ರಂದು ಬೆ.09 ಗಂಟೆಗೆ ನ್ಯಾಮತಿ ತಾಲ್ಲೂಕು ಆಡಳಿತ ವತಿಯಿಂದ ಆಯೋಜಿಸಿರುವ ಕನ್ನಡ ರಾಜ್ಯೋತ್ಸವ ಹಾಗೂ ಬೆ.09.30 ಕ್ಕೆ ಹೊನ್ನಾಳಿ ತಾಲ್ಲೂಕು ಆಡಳಿತ ವತಿಯಿಂದ ಆಯೋಜಿಸಿರುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮ.12 ರಿಂದ ಸ.07 ರವರೆಗೆ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನ ವ್ಯಾಪ್ತಿಯ ಗ್ರಾಮಗಳಲ್ಲಿ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು. ನಂತರ ಹೊನ್ನಾಳಿಗೆ ಪ್ರಯಾಣ ಮತ್ತು ವಾಸ್ತವ್ಯ.
ನ.02 ರಂದು ಬೆ.11 ಕ್ಕೆ ಕೂಲಂಬಿ ಗ್ರಾಮದಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮ.01 ಕ್ಕೆ ಹೊನ್ನಾಳಿ ಪಟ್ಟಣದಲ್ಲಿ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಫಲಾನುಭವಿಗಳಿಗೆ ವಿತರಿಸುವ ಕಾರ್ಯಕ್ರಮದಲ್ಲಿ ಭಾಗವಹಿಸುವುದು. ನಂತರ ಹೊನ್ನಾಳಿಯಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹ್ವಾಲುಗಳನ್ನು ಸ್ವೀಕರಿಸುವುದು ಮತ್ತು ಹೊನ್ನಾಳಿಯಲ್ಲಿ ವಾಸ್ತವ್ಯ.
ನ.03 ರಂದು ಬೆ.11 ಕ್ಕೆ ಹೊನ್ನಾಳಿ ಪಟ್ಟಣದ ಅಗಳ ಮೈದಾನದಲ್ಲಿ ಆಯೋಜಿಸಿರುವ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸ.04 ಕ್ಕೆ ಹೊನ್ನಾಳಿಯಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹ್ವಾಲುಗಳನ್ನು ಸ್ವೀಕರಿಸುವುದು ಮತ್ತು ಹೊನ್ನಾಳಿಯಲ್ಲಿ ವಾಸ್ತವ್ಯ.
ನ.04 ರಂದು ಬೆ.11 ಕ್ಕೆ ಹೊನ್ನಾಳಿ ಪಟ್ಟಣದಲ್ಲಿ ಎಸ್.ಎಸ್.ಎಲ್.ಸಿ., ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸ.04 ಕ್ಕೆ ಕುಂಬಳೂರು ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಪ್ರಯುಕ್ತ ಆಯೋಜಿಸಿರುವ ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ರಾ.10 ಕ್ಕೆ ಹೊನ್ನಾಳಿಗೆ ಪ್ರಯಾಣ ಮತ್ತು ವಾಸ್ತವ್ಯ.
ನ.05 ರಂದು ಬೆ.11 ಕ್ಕೆ ಕುಂಬಳೂರು ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮ.02 ಕ್ಕೆ ಚಿನ್ನ್ನಿಕಟ್ಟೆ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸ.06 ಕ್ಕೆ ಚಿನ್ನ್ನಿಕಟ್ಟೆ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಪ್ರಯುಕ್ತ ಆಯೋಜಿಸಿರುವ ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ರಾ.10 ಕ್ಕೆ ಹೊನ್ನಾಳಿಗೆ ಪ್ರಯಾಣ ಮತ್ತು ವಾಸ್ತವ್ಯ ಮಾಡುವರು ಎಂದು ವಿಶೇಷ ಕರ್ತವ್ಯಾಧಿಕಾರಿ ಕೆ.ರುದ್ರೇಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.