ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಹಯೋಗದಲ್ಲಿ ಮತದಾರರ ಪಟ್ಟಿಯ ಸಂಕ್ಷಿಪ್ತ ಪರಿಷ್ಕರಣೆ-2023ರ ಪರಿಷ್ಕರಣೆ ಹಾಗೂ ಹೊಸ ಮತದಾರರ ಸೇರ್ಪಡೆ ಕುರಿತಂತೆ ನವಂಬರ್ 09 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಹೈಸ್ಕೂಲ್ ಮೈದಾನದಿಂದ ಕಾಲ್ನಡಿಗೆ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
   ಯಾವುದೇ ಮತದಾರ ಮತದಾನದಿಂದ ಹೊರಗುಳಿಯಬಾರದು ಎಂಬ ಧ್ಯೇಯದೊಂದಿಗೆ ಮತದಾರರ ಪಟ್ಟಿಯಿಂದ ಹೊರಗುಳಿದ ಮತದಾರರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸಲು ಹಾಗೂ ಹೊಸ ಮತದಾರರು ಮತದಾರರ ಪಟ್ಟಿಯ ಪರಿಷ್ಕರಣೆಯಲ್ಲಿ ಸೇರ್ಪಡೆಗೊಳಿಸುವ ಕುರಿತು ಈ ಜಾಥಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಲ್ಲಾ ಮತದಾರರು ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಲು  ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎ ಚೆನ್ನಪ್ಪ ಹಾಗೂ ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್ ಪ್ರಕಟಣೆಯಲ್ಲಿ ಕೋರಿದ್ದಾರೆ.

Leave a Reply

Your email address will not be published. Required fields are marked *