ಸಾಸ್ವೆಹಳ್ಳಿ: ಸಮೀಪದ ಬೆನಕನಹಳ್ಳಿಯ ಮಾಜಿ ಶಾಸಕ ದಿವಂಗತ ಡಿ.ಜಿ ಬಸವನಗೌಡರ ಪತ್ನಿ ಇಂದಿರಮ್ಮ ಡಿ.ಜಿ (82) ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಂಗಳವಾರ ಸಂಜೆ ನಿಧನರಾದರು.
ಇಬ್ಬರು ಪುತ್ರರು ಹಾಗೂ ಪುತ್ರಿ ಇದ್ದಾರೆ. ಬೆನಕನಹಳ್ಳಿ ಬುಧವಾರ ಬೆಳಗ್ಗೆ 11 ಗಂಟೆಗೆ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಧ್ಯಾಹ್ನ 3 ಗಂಟೆಗೆ ಬೆನಕನಹಳ್ಳಿಯ ಶಾಂತಿವನದಲ್ಲಿ ಅಂತ್ಯ ಸಂಸ್ಕಾರ ನಡೆಯುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.
ಸಂತಾಪ: ಮಾಜಿ ಶಾಸಕ ಡಿ.ಜಿ ಶಾಂತನಗೌಡರು, ಬೆನಕನಹಳ್ಳಿ ಗ್ರಾಮಸ್ಥರು. ಹಿರೇಕಲ್ಮಠದ ಡಾ.ಚನ್ನಮಲ್ಲಿಕಾರ್ಜುನ ಸ್ವಾಮೀಜಿ, ಹೊಟ್ಯಾಪುರ ಹಿರೇಮಠದ ಗಿರಿಸಿದ್ದೇಶ್ವರ ಸ್ವಾಮೀಜಿ, ರಾಂಪುರ ಬೃಹನ್ಮಠದ ಹಾಲಸ್ವಾಮೀಜಿ, ಸಂತಾಪ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *