ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಡಿ.ಆರ್.ಆರ್ ವಿದ್ಯಾಸಂಸ್ಥೆ ದಾವಣಗೆರೆ ಸಹಯೋಗದಲ್ಲಿ ನವಂಬರ್ 18 ರಂದು ಬೆಳಗ್ಗೆ 10 ಗಂಟೆಗೆ ಡಿ.ಆರ್.ಆರ್ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಮಕ್ಕಳ ಹಕ್ಕುಗಳ ಮಾಸಾಚರಣೆ ಅಂಗವಾಗಿ ಮಕ್ಕಳು ದಿನಾಚರಣೆ ಮತ್ತು ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಎಫ್.ಟಿ.ಎಸ್.ಸಿ ನ್ಯಾಯಾಲಯದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀಪಾದ ಎನ್ ಕಾರ್ಯಕ್ರಮವನ್ನು ಉದ್ಘಾಟಿಸುವರು. ಡಿ.ಆರ್.ಆರ್ ವಿದ್ಯಾಸಂಸ್ಥೆಯ ಟ್ರಸ್ಟಿಗಳಾದ ಸ್ವಾತಿ ಶ್ರೀನಿವಾಸಮೂರ್ತಿ ಅಧ್ಯಕ್ಷತೆವಹಿಸುವರು.
ಮುಖ್ಯ ಅತಿಥಿಗಳಾಗಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಪ್ರವೀಣನಾಯಕ, ಜಿರಿಯ ವಕೀಲರಾದ ಎಲ್.ಹೆಚ್ ಅರುಣ್ ಕುಮಾರ್, ಪಾಲ್ಗೋಳ್ಳುವರು. ಪ್ಯಾನಲ್ ವಕೀಲರಾದ ಅನ್ನಪೂರ್ಣ.ಟಿ.ಎಂ ಸಂಪನ್ಮೂಲ ವ್ಯಕ್ತಿಗಳಾಗಿರುವರು.
ಡಿ.ಸಿ.ಎಂ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಭೋಜರಾಜ್ ಯಾದವ್ ಆರ್, ಬಸವನಗೌಡ.ಎ.ಎಂ, ಹೆಚ್.ಎಸ್ ಹಾಲೇಶ್, ರಾಧಾ.ಕೆ.ಎಸ್ ಉಪಸ್ಥಿತರಿರುವರೆಂದು ಪ್ರಕಟಣೆ ತಿಳಿಸಿದೆ.