ದಾವಣಗೆರೆ, ನ.18 )- ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ನವೆಂಬರ್ 23 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ನವೆಂಬರ್ 23 ರಂದು ಬೆಳಿಗ್ಗೆ 09 ಗಂಟೆಗೆ ಬೆಂಗಳೂರಿನಿಂದ ಹೊರಟು 11 ಗಂಟೆಗೆ ಚಿತ್ರದುರ್ಗದ ಮುರಘಾ ಮಠ ಆವರಣದಲ್ಲಿರುವ ಹೆಲಿಪ್ಯಾಡ್‍ಗೆ ಆಗಮಿಸುವರು. ನಂತರ 11.15ಕ್ಕೆ ಜಗಳೂರಿನ ನಡೆಯಲಿರುವ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಹಾಗೂ ಮಧ್ಯಾಹ್ನ 1.30ಕ್ಕೆ ಜಗಳೂರು ತಾಲ್ಲೂಕು ಕ್ರೀಡಾಂಗಣದ ಹೆಲಿಪ್ಯಾಡ್ ನಿಂದ ಹೊರಟು ಮಧ್ಯಾಹ್ನ 02 ಗಂಟೆಗೆ ದಾವಣಗೆರೆ ಜಿಎಂಐಟಿ ಹೆಲಿಪ್ಯಾಡ್‍ಗೆ ಆಗಮಿಸುವರು. ನಂತರ 2.25ಕ್ಕೆ ಹರಿಹರದಲ್ಲಿ ನಡೆಯಲಿರುವ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 04 ಗಂಟೆಗೆ ಹರಿಹರದಿಂದ ಹೊರಟು 4.15ಕ್ಕೆ ದಾವಣಗೆರೆ ಜಿಎಂಐಟಿ ಹೆಲಿಪ್ಯಾಡ್ ನಿಂದ ಕೇಂದ್ರಸ್ಥಾನ ತಲುಪವರೆಂದು ಮುಖ್ಯಮಂತ್ರಿಗಳ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.