ದಾವಣಗೆರೆ ನ.18 ಭದ್ರಾ ಎಡದಂಡೆ ನಾಲೆಗೆ ಜುಲೈ 23 ರಿಂದ ಹಾಗೂ ಬಲದಂಡೆ ನಾಲೆಗಳಿಗೆ ಜುಲೈ 14 ರಾತ್ರಿಯಿಂದ ನೀರನ್ನು ಹರಿಸಲು ಆದೇಶಿಸಲಾಗಿತ್ತು.
ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳಿಗೆ ಹರಿಸಲಾಗುತ್ತಿರುವ ನೀರನ್ನು ನಿಲ್ಲಿಸುವ ಬಗ್ಗೆ ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ಅಧ್ಯಕ್ಷರು ನಡೆಸಿದ ಸಲಹಾ ಸಮಿತಿ ಸಭೆಯನ್ನು ನಡೆಸಿ ನವಂಬರ್ 25 ರಂದು ರಾತ್ರಿಯಿಂದ ನೀರನ್ನು ನಿಲ್ಲಿಸಲು ಸಭೆಯಲ್ಲಿ ತೀರ್ಮಾನಿಸಲಾಗಿರುತ್ತದೆ. ಆದ್ದರಿಂದ ಭದ್ರಾ ಜಲಶಯದಿಂದ ಭದ್ರಾ ಬಲದಂಡೆ ನಾಲೆ, ಎಡದಂಡೆ ನಾಲೆ, ಆನವೇರಿ ಶಾಖಾನಾಲೆ, ದಾವಣಗೆರೆ, ಮಲೇಬೆನ್ನೂರು ಶಾಖಾನಾಲೆ ಮತ್ತು ಹರಿಹರ ಶಾಖಾ ನಾಲೆಗಳಿಗೆ ಹರಿಸುತ್ತಿರುವ ನೀರನ್ನು ನವಂಬರ್ 25ರ ರಾತ್ರಿಯಿಂದ ನಿಲ್ಲಿಸಲಾಗುವುದೆಂದು ಪ್ರಕಟಣೆ ತಿಳಿಸಿದೆ.