ನವಂಬರ್ 21 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ 1986(ನಿಷೇಧ ಹಾಗೂ ನಿಯಂತ್ರಣ) ಕಾಯ್ದೆಯ ಕಲಂ 17ರಡಿ ನೇಮಕಗೊಂಡ ವಿವಿಧ ಇಲಾಖೆಗಳ ನಿರೀಕ್ಷಕರಿಗೆ ತರಬೇತಿ ಕಾರ್ಯಗಾರ ಹಮ್ಮಿಕೊಳ್ಳಲಾಗಿದೆ.
 ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಸ್ಥೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಲಾದ ಕಾರ್ಯಾಗಾರವನ್ನು ಜಿ.ಪಂ. ಮುಖ್ಯಕಾರ್ಯನಿರ್ವಾಹಣಾಧಿಕಾರಿ ಡಾ.ಎ.ಚೆನ್ನಪ್ಪ ಉದ್ಘಾಟಿಸುವರು. ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
  ಮುಖ್ಯಅತಿಥಿಗಳಾಗಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರವೀಣನಾಯಕ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್, ಮಹಾನಗರಪಾಲಿಕೆಯ ಆಯುಕ್ತರಾದ ವಿಶ್ವನಾಥ ಮುದ್ದಜ್ಜಿ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ  ಇಲಾಖೆ ಉಪನಿರ್ದೇಶಕ ತಿಪ್ಪೇಶಪ್ಪ, ಸಹಾಯಕ ಕಾರ್ಮಿಕ ಆಯುಕ್ತರಾದ ಎಸ್.ಆರ್ ವೀಣಾ, ಕಾರ್ಖಾನೆ ಮತ್ತು ಬಾಯ್ಲರ್‍ಗಳ ಇಲಾಖೆ ಸಹಾಯಕ ನಿರ್ದೇಶಕ ಚಿನ್ಮಯಿ ಭಾಗವಹಿಸಲಿದ್ದಾರೆ.

Leave a Reply

Your email address will not be published. Required fields are marked *