ಹೊನ್ನಾಳಿ:
ಆದ್ಯತೆಯ ಮೇರೆಗೆ ಎಲ್ಲರಿಗೂ ಸೂರು ನೀಡುವುದು ಕೇಂದ್ರ ಮತ್ತು ರಾಜ್ಯ ಸರಕಾರಗಳ ಗುರಿಯಾಗಿದೆ ಎಂದು ಯಕ್ಕನಹಳ್ಳಿ ಗ್ರಾಪಂ ಅಧ್ಯಕ್ಷ ಯರೇಹಳ್ಳಿ ವೈ.ಪಿ. ದಿನೇಶ್ ಹೇಳಿದರು.
ತಾಲೂಕಿನ ಯಕ್ಕನಹಳ್ಳಿ ಗ್ರಾಪಂ ಕಚೇರಿಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಆವಾಸ್ ದಿನಾಚರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ವಸತಿ ರಹಿತರಿಗೆ ಮನೆಗಳನ್ನು ನಿರ್ಮಿಸಲು ಧನಸಹಾಯ ನೀಡುವುದು ಗ್ರಾಪಂನ ಆದ್ಯತೆಯಾಗಿದೆ. ಆ ನಿಟ್ಟಿನಲ್ಲಿ ನಾವೆಲ್ಲರೂ ಕರ್ತವ್ಯ ನಿರ್ವಹಿಸುತ್ತಿದ್ದೇವೆ ಎಂದು ತಿಳಿಸಿದರು.
ಈ ಹಿಂದಿನ ವರ್ಷಗಳಲ್ಲಿ ಗ್ರಾಪಂ ವತಿಯಿಂದ ನಿವೇಶನ ರಹಿತರು ಮತ್ತು ವಸತಿ ರಹಿತರ ಪಟ್ಟಿ ತಯಾರಿಸಿ ಮನೆಗಳನ್ನು ನಿರ್ಮಿಸಿಕೊಳ್ಳಲು ಅನುವು ಮಾಡಿಕೊಡಲಾಗಿತ್ತು. ಅಂಥ ಅರ್ಹ ಫಲಾನುಭವಿಗಳ ಸಮೀಕ್ಷೆ ನಡೆಸಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ವಿವರಿಸಿದರು.
ಯಕ್ಕನಹಳ್ಳಿ ಗ್ರಾಪಂ ಪಿಡಿಒ ಕರಿಯಪ್ಪ ಮಾತನಾಡಿದರು. ಯಕ್ಕನಹಳ್ಳಿ ಗ್ರಾಪಂ ಉಪಾಧ್ಯಕ್ಷೆ ರಂಗಮ್ಮ, ಸದಸ್ಯರಾದ ಯಕ್ಕನಹಳ್ಳಿ ವೈ.ಕೆ. ದಯಾನಂದ್, ಮಂಜಮ್ಮ, ರಮೇಶ್‍ನಾಯ್ಕ, ಪವಿತ್ರ ರೇವಣಸಿದ್ಧಪ್ಪ, ಅನಸೂಯಮ್ಮ, ಚಂದ್ರಪ್ಪ, ಗ್ರಾಪಂ ಸಿಬ್ಬಂದಿ ಇದ್ದರು.

Leave a Reply

Your email address will not be published. Required fields are marked *