ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಶ್ರಮಿಸಬೇಕಾಗಿದೆ. ಬಾಲ ಕಾರ್ಮಿಕರಾಗಿ ದುಡಿಯುತ್ತಿರುವ ಮಕ್ಕಳನ್ನು ರಕ್ಷಿಸಿ ಶಿಕ್ಷಣದ ಮೂಲಕ ಮುಖ್ಯ ವಾಹಿನಿಗೆ  ತರುವ ನಿಟ್ಟಿನಲ್ಲಿ ಸಮನ್ವಯದಿಂದ ಕಾರ್ಯನಿರ್ವಹಿಸಿ ಎಂದು ನಿರೀಕ್ಷಕರಿಗೆ  ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್  ಅವರು ಸಲಹೆ ನೀಡಿದರು.
   ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯ್ತಿ, ಪೆÇಲೀಸ್ ಇಲಾಖೆ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಸ್ಥೆ ಮತ್ತು ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲಾಡಳಿತ ಭವನದಲ್ಲಿ ಹಮ್ಮಿಕೊಂಡಿದ್ದ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ 1986( ನಿμÉೀಧ ಹಾಗೂ ನಿಯಂತ್ರಣ) ಕಾಯ್ದೆಯ ಕಲಂ 17ರ ಅಡಿ ನೇಮಕಗೊಂಡ ವಿವಿಧ ಇಲಾಖೆಗಳ ನಿರೀಕ್ಷಕರಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಮುಂದುವರಿದ ದೇಶಗಳಲ್ಲಿ ಈಗಾಗಲೇ ಬಾಲ ಕಾರ್ಮಿಕ ಪದ್ಧತಿ ನಿವಾರಣೆಯಾಗಿದೆ. ಭಾರತದಲ್ಲೂ ಈ ಪಿಡುಗು ನಿವಾರಿಸಲು ವಿವಿಧ ಇಲಾಖೆಗಳ ನಿರೀಕ್ಷಕರು ಶ್ರಮಿಸಬೇಕಿದೆ. ಮನೆ ಕೆಲಸ, ಅಂಗಡಿ, ಪೌಲ್ಟ್ರಿ ಫಾರಂ, ಕಟ್ಟಡ ನಿರ್ಮಾಣ ಸೇರಿದಂತೆ ಹಲವೆಡೆ ಬಾಲಕಾರ್ಮಿಕರು ಈಗಲೂ ಕಂಡು ಬರುತ್ತಿದ್ದಾರೆ. ಬಾಲ ಕಾರ್ಮಿಕ ಕಾಯ್ದೆಯ ಸೆಕ್ಷನ್ 17ರ ಅಡಿ ನೇಮಕಗೊಂಡಿರುವ ನಿರೀಕ್ಷಕರಿಗೆ ಅಧಿಕಾರ ಹಾಗೂ ಜವಾಬ್ದಾರಿಗಳಿವೆ. ಇವುಗಳನ್ನು ಚೆನ್ನಾಗಿ ಮನದಟ್ಟು ಮಾಡಿಕೊಂಡು ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶ್ರಮಿಸಬೇಕು ಎಂದರು.
    ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಕಲಬುರಗಿ ಪ್ರಾದೇಶಿಕ ಉಪ ಕಾರ್ಮಿಕ ಆಯುಕ್ತ ಡಿ.ಜಿ. ನಾಗೇಶ್, ಬಾಲಕಾರ್ಮಿಕ ಪದ್ಧತಿ ನಿವಾರಣೆ ಕೇವಲ ಪೆÇಲೀಸರು ಹಾಗೂ ಕಾರ್ಮಿಕ ಇಲಾಖೆಗೆ ಸೀಮಿತವಲ್ಲ. 11 ಇಲಾಖೆಗಳ ಅಧಿಕಾರಿಗಳನ್ನು ನಿರೀಕ್ಷಕರಾಗಿ ನೇಮಿಸಲಾಗಿದೆ. ಸಾರ್ವಜನಿಕರೂ ಸಹ ಬಾಲ ಕಾರ್ಮಿಕ ಪದ್ಧತಿ ನಿವಾರಣೆಗೆ ನೆರವಾಗಬೇಕು ಎಂದರು.
    ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಕೆ. ನಾಗರಾಜ್ ಮಾತನಾಡಿಸಮಾಜ ಕಲ್ಯಾಣ ಇಲಾಖೆಯಿಂದ ಮಕ್ಕಳಿಗೆ ವಸತಿ ಶಾಲೆ ಹಾಗೂ ಉಚಿತ ಶಿಕ್ಷಣದ ಸೌಲಭ್ಯಗಳಿವೆ. ಈ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಮೂಲಕ ಬಾಲ ಕಾರ್ಮಿಕ ಪದ್ಧತಿಗೆ ಸಿಲುಕಿರುವ ಮಕ್ಕಳ ಪುನರ್ವಸತಿ ಮಾಡಬೇಕು. ಶಾಲೆಗಳಿಂದ ಮಕ್ಕಳು ಹೊರಗುಳಿಯದಂತೆ ನೋಡಿಕೊಳ್ಳಬೇಕಾಗಿದೆ.  ಎಂದು ಹೇಳಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಬಳ್ಳಾರಿ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತರಾದ ಎಸ್.ಆರ್. ವೀಣಾ, ಮಕ್ಕಳನ್ನು ಬಾಲ್ಯ ಹಾಗೂ ಶಿಕ್ಷಣದಿಂದ ವಂಚಿತ ಮಾಡುವ ಬಾಲ ಕಾರ್ಮಿಕ ಪದ್ಧತಿ ನಿವಾರಿಸಬೇಕಿದೆ. ವಿವಿಧ ಇಲಾಖೆಗಳ ಸಹಕಾರ ದೊರೆತರೆ, ಎಲ್ಲರೂ ಒಂದುಗೂಡಿ ಕೆಲಸ ಮಾಡಿದರೆ ಜಿಲ್ಲೆಯನ್ನು ಬಾಲ ಕಾರ್ಮಿಕ ಮುಕ್ತ ಮಾಡಬಹುದು ಎಂದರು.
   ವೇದಿಕೆಯ ಮೇಲೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ತಿಪ್ಪೇಶಪ್ಪ ಉಪಸ್ಥಿತರಿದ್ದರು.
ಶಾಂತ ಹಾಗೂ ರೇಷ್ಮ ಪ್ರಾರ್ಥಿಸಿದರು. ಜಿಲ್ಲಾ ಕಾರ್ಮಿಕ ಅಧಿಕಾರಿ ಜಿ. ಇಬ್ರಾಹಿಂ ಸಾಬ್ ಸ್ವಾಗತಿಸಿದರು. ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಇ.ಎನ್. ಪ್ರಸನ್ನ ನಿರೂಪಿಸಿದರು.

Leave a Reply

Your email address will not be published. Required fields are marked *