ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ನ್ಯೂ ಡೆಲ್ಲಿ ಪಬ್ಲಿಕ್ ಸ್ಕೂಲ್ ಸಹಯೋಗದಲ್ಲಿ ಭಾರತ ಸಂವಿಧಾನ ಸಪ್ತಾಹದ ಅಂಗವಾಗಿ ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆಯನ್ನು ನವಂಬರ್ 30 ರಂದು ಬೆಳಿಗ್ಗೆ 11.30ಕ್ಕೆ ನಗರದ ನ್ಯೂ ಡೆಲ್ಲಿ ಪಬ್ಲಿಕ್ ಸ್ಕೂಲ್‍ನಲ್ಲಿ ಆಯೋಜಿಸಲಾಗಿದೆ.
   ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರವೀಣ ನಾಯಕ  ಅವರು ಉದ್ಘಾಟನೆ  ನೆರವೇರಿಸಲಿದ್ದು,  ನ್ಯೂ ಡೆಲ್ಲಿ ಪಬ್ಲಿಕ್ ಸ್ಕೂಲ್ ಮುಖ್ಯ ಶಿಕ್ಷಕರಾದ ಪೂರ್ಣಿಮ.ಬಿ.ಎಸ್ ಅಧ್ಯಕ್ಷತೆ ವಹಿಸಲಿದ್ದಾರೆ.  ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಂಬಣ್ಣ.ಟಿ, ಶಿಕ್ಷಣ ಸಂಯೋಜನಕ ನಾಗರಾಜ.ಡಿ ಪಾಲ್ಗೊಳ್ಳುವರು. ಹಿರಿಯ ವಕೀಲರಾದ ಎಲ್.ಹೆಚ್ ಅರುಣ್ ಕುಮಾರ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸುವರೆಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *