ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಕ್ಷೇತ್ರದ ಶಾಸಕರಾದ ಎಂ.ಪಿ.ರೇಣುಕಾಚಾರ್ಯ ಇವರು ಡಿಸೆಂಬರ್-2022ರ ಮಾಹೆಯಲ್ಲಿ ಕ್ಷೇತ್ರ ಪ್ರವಾಸ ಕೈಗೊಳ್ಳಲಿದ್ದಾರೆ.
   ಡಿಸೆಂಬರ್ 02 ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನಿಂದ ಹೊರಟು ಮಧ್ಯಾಹ್ನ 03 ಗಂಟೆಗೆ ಹೊನ್ನಾಳಿ ತಲುಪುವರು. ಸಂ.05 ಗಂಟೆಗೆ ಹೊನ್ನಾಳಿಯ ಶ್ರೀ ಬೀರಲಿಂಗೇಶ್ವರ-ಹಳದಮ್ಮ-ವೀರಭದ್ರೇಶ್ವರ ಸ್ವಾಮಿಯ ಗುಗ್ಗಳ ಪ್ರಯುಕ್ತ ಕಾಟ ಬಯಲು ಕುಸ್ತಿ ಕಾರ್ಯಕ್ರಮದಲ್ಲಿ ಭಾಗವಹಿಸುವರು.  ನಂತರ ಹೊನ್ನಾಳಿಯಲ್ಲಿ ವಾಸ್ತವ್ಯ.
  ಡಿಸೆಂಬರ್ 03 ರಂದು ಬೆ.10.15ಕ್ಕೆ ಹೊನ್ನಾಳಿ ತಾಲ್ಲೂಕಿನ ಅರಕೆರೆ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮ.1.30ಕ್ಕೆ ಹೊನ್ನಾಳಿ ತಾಲ್ಲೂಕಿನ ಹೊಳೆಹರಳಹಳ್ಳಿ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂ.05 ಗಂಟೆಗೆ ಹೊನ್ನಾಳಿಗೆ ಪ್ರಯಾಣ. ಹೊನ್ನಾಳಿಯಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹ್ವಾಲುಗಳನ್ನು ಸ್ವೀಕರಿಸುವರು. ರಾತ್ರಿ.07 ಗಂಟೆಗೆ ಹೊಳೆಹರಳಹಳ್ಳಿ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಪ್ರಯುಕ್ತ ಆಯೋಜಿಸಿರುವ ಸಾಂಸ್ಕøತಿಕ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ನಂತರ ರಾ.10.30ಕ್ಕೆ ಹೊನ್ನಾಳಿಗೆ ಪ್ರಯಾಣ ಮತ್ತು ವಾಸ್ತವ್ಯ.ಮಾಡುವರು.
   ಡಿಸೆಂಬರ್ 04 ರಂದು ಬೆ.10.30ಕ್ಕೆ ಹೊನ್ನಾಳಿ ತಾಲ್ಲೂಕಿನ ದಿಡಗೂರು ಗ್ರಾಮದಲ್ಲಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೋಕೋ, ಕಬಡ್ಡಿ ಮೈದಾನದ ಶಂಕುಸ್ಥಾಪನೆ ನೆರವೇರಿಸುವರು.ಮ.01 ಗಂಟೆಗೆ ಹೊನ್ನಾಳಿಗೆ ಪ್ರಯಾಣ. ಹೊನ್ನಾಳಿಯಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹ್ವಾಲುಗಳನ್ನು ಸ್ವೀಕರಿಸುವರು. ಮ.03 ಗಂಟೆಗೆ ವಿಸ್ತಾರ ನ್ಯೂಸ್ ಚಾನಲ್‍ನ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂ.04 ಗಂಟೆಗೆ ಹೊನ್ನಾಳಿ ಪಟ್ಟಣದಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸುವುದು ಮತ್ತು ಹೊನ್ನಾಳಿಯಲ್ಲಿ ವಾಸ್ತವ್ಯ. ಮಾಡುವರು.
   ಡಿಸೆಂಬರ್ 05 ರಂದು ಬೆ.11 ಗಂಟೆಗೆ ಹೊನ್ನಾಳಿಯ ತಾಲ್ಲೂಕು ಪಂಚಾಯತಿ ಸಾಮಥ್ರ್ಯಸೌಧ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸುವರು. ಮ.02 ರಿಂದ ಸಂಜೆ 07 ಗಂಟೆಯವರೆಗೆ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನ ಗ್ರಾಮಗಳಿಗೆ ಭೇಟಿ ನೀಡಿ, ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.
    ಡಿಸೆಂಬರ್ 06 ರಂದು ಬೆ.11 ಗಂಟೆಗೆ ಹೊನ್ನಾಳಿ ತಾಲ್ಲೂಕು ಕ್ರೀಡಾಂಗಣದಲ್ಲಿ ಹೊನ್ನಾಳಿ ಪಟ್ಟಣದಲ್ಲಿ ಯುವ ಜನ ಸೇವಾ ಮತ್ತು ಕ್ರೀಡಾ ಇಲಾಖೆ ವತಿಯಿಂದ ಆಯೋಜಿಸಿರುವ ಗ್ರಾಮೀಣ ಕ್ರೀಡಾಕೂಟದ ಉದ್ಘಾಟನೆ ನೆರವೇರಿಸುವರು. ನಂತರ ರಾತ್ರಿ 09 ಗಂಟೆಗೆ ರಸ್ತೆ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರೆಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *