ಬೆಂಗಳೂರು: ೬೭ನೇ ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡ ವಿಶೇಷ ಪುಸ್ತಕಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಡಿಸೆಂಬರ್ ೧೦ ರವರೆಗೆ ಮುಂದುವರೆಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಶ್ರೀ ನೇ.ಭ.ರಾಮಲಿಂಗ ಶೆಟ್ಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಿಸೆಂಬರ್ ೧೦ ರವರೆಗೆ ಕಚೇರಿ ಸಮಯದಲ್ಲಿ ನಗರದ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಚೇರಿ ಆವರಣದಲ್ಲಿ ಪುಸ್ತಕ ಪ್ರದರ್ಶನ ಮತ್ತು ಮಾರಾಟ ಮಳಿಗೆ ಆರಂಭಿಸಲಾಗುತ್ತಿದೆ. ಶೇ.೧೦ ರಿಂದ ಶೇ.೭೫ ರಷ್ಟು ರಿಯಾಯಿತಿ ದರದಲ್ಲಿ ಅಮೂಲ್ಯವಾದ ಪುಸ್ತಕಗಳ ಮಾರಾಟದ ವ್ಯವಸ್ಥೆ ಮಾಡಲಾಗಿದೆ.
ಕನ್ನಡ ಸಾಹಿತ್ಯ ಇತಿಹಾಸದಲ್ಲಿ ತೀರಾ ಅಪರೂಪವೆನಿಸಿದ ಪುಸ್ತಕಗಳ ಪ್ರಕಟಣೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಮಾಡುತ್ತ ಬಂದಿದ್ದು, ಪರಿಷತ್ತು ಪ್ರಕಟಿಸಿರುವ ಎಲ್ಲಾ ಪ್ರಕಟಣೆಗಳು ಮಾರಾಟಕ್ಕೆ ಲಭ್ಯವಾಗಿವೆ. ಕನ್ನಡ ರತ್ನಕೋಶ ಮತ್ತು ಸಂಕ್ಷಿಪ್ತ ಕನ್ನಡ ನಿಘಂಟು, ಸಂಕ್ಷಿಪ್ತ ಕನ್ನಡ ಇಂಗ್ಲಿಷ್ ನಿಘಂಟು, ಬೃಹತ್ ಕನ್ನಡ-ಕನ್ನಡ ನಿಘಂಟು, ಪರೀಕ್ಷೆ ಪುಸ್ತಕಗಳು, ಗದ್ಯಾನುವಾದ, ಶತಮಾನೋತ್ಸವ ಮಾಲಿಕೆ ಪುಸ್ತಕಗಳು, ಆಧುನಿಕ ಕನ್ನಡ ಸಾಹಿತ್ಯ ಚರಿತ್ರೆ ಎಲ್ಲಾ ಸಂಪುಟಗಳು, ಮಹಿಳಾ ಸಾಹಿತ್ಯ ಸಂಪುಟಗಳು, ದಲಿತ ಸಾಹಿತ್ಯ ಸಂಪುಟಗಳು, ಜೀವನ ಚರಿತ್ರೆಗಳು, ಪಿ.ಹೆಚ್.ಡಿ ಪುಸ್ತಕಗಳು, ಜಿಲ್ಲಾ ಸಾಹಿತ್ಯ ಸಮ್ಮೇಳನದ ಪುಸ್ತಕಗಳು, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸ್ಮರಣಿಕೆ ಸಂಚಿಕೆಗಳು ಹಾಗೂ ಇತರೆ ಪ್ರಕಟಣೆಗಳು ಮಾರಾಟಕ್ಕೆ ಲಭ್ಯವಿದೆ ಎಂದು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ ಎಂದು ಇದರ ಸದುಪಯೋಗವನ್ನು ದಾವಣಗೆರೆ ಜಿಲ್ಲೆಯ ಸಾಹಿತ್ಯ ಆಸಕ್ತರು ಸದುಪಯೋಗ ಪಡಿಸಿಕೊಳ್ಳಬೇಕೆಂದು ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ. ವಾಮದೇವಪ್ಪ ಸಾರ್ವಜನಿಕರ ಗಮನಸೆಳೆದಿದ್ದಾರೆ.

Leave a Reply

Your email address will not be published. Required fields are marked *